ರಾಯಚೂರು.09.ಆಗಸ್ಟ್.25: ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿವಿಧ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಮೈಕ್ರೋ ಕ್ರೆಡಿಟ್ ಹಣಕಾಸು, ಸ್ವಯಂ ಉದ್ಯೋಗ, ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಖರೀದಿ ಯೋಜನೆಗೆ ಸೆಪ್ಟಂಬರ್ 10ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
2023-24 ಹಾಗೂ 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆ ಸಾಲಿನ ಅರ್ಜಿಗಳನ್ನು ಸೇರಿಸಿ ಪರಿಗಣಿಸಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿಯಲ್ಲಿ ಫಲಾನುಭವಿಗಳ ಆಯ್ಕೆ ನಡೆಸಲಾಗುವುದು. ಆಯ್ಕೆಯಾದ ಫಲಾನುಭವಿಗಳ ಜಾತಿ, ಯೋಜನೆ, ಮತ್ತು ಪೂರ್ಣ ವಿಳಾಸದೊಂದಿಗೆ ಪಟ್ಟಿಯನ್ನು ಸಿದ್ದಪಡಿಸಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.