|

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೀದರ.27.ಜೂನ್.25:- 2025-26 ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿದ್ಯಾರ್ಥಿ ವೇತನ ಯೋಜನೆಗಳಾದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ (1ರಿಂದ 8ನೇ ತರಗತಿ), ಶುಲ್ಕ ಮರುಪಾವತಿ ಯೋಜನೆ, ಐಐಟಿ, ಐಐಎಂ etc  ಉತ್ತೇಜನ ಯೋಜನೆ, ಎಂಫಿಲ್ ಮತ್ತು ಪಿಹೆಚ್.ಡಿ ಫೆಲೋಶಿಪ್ ಯೋಜನೆ, ಬಿ.ಎಸ್ಸಿ.ನರ್ಸಿಂಗ ಮತ್ತು ಜಿಎನ್‌ಎಂ ನರ್ಸಿಂಗ್ ಉತ್ತೇಜನ ಯೋಜನೆ ಹಾಗೂ ವಿದೇಶಿ ವಿದ್ಯಾರ್ಥಿವೇತನ ಯೋಜನೆಗಳಡಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಡಲು ಅರ್ಹರಿಂದ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಳಿರಾಮ ಕುಶಾಲರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹರು  SSP (https://ssp.karnataka.gov.in) ಹಾಗೂ ಸೇವಾ ಸಿಂಧು ಪೋರ್ಟಲ್  (https://sevasindhuservices.karnataka.gov.in)  ಮೂಲಕ ದಿನಾಂಕ: 30-09-2025 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8951391061 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *