Home » ಲೈವ್ ನ್ಯೂಸ್ » ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ :ವಿದ್ಯಾರ್ಥಿನಿಲಯ ಗಳ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  :ವಿದ್ಯಾರ್ಥಿನಿಲಯ ಗಳ ಪ್ರವೇಶಕ್ಕೆ ಆನ್ ಲೈನ್  ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ.14.ಜೂನ್.26:2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ/ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ    ತಾಲ್ಲೂಕು ವಿಸ್ತರಣಾಧಿಕಾರಿ ಅವರು ತಿಳಿಸಿದ್ದಾರೆ.

ಶೈಕ್ಷಣಿಕ ವರ್ಷಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ/ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ (ಪಿ.ಯು.ಸಿ, ಡಿಪ್ಲೋಮಾ ಐ.ಟಿ.ಐ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ಮಾತ್ರ) (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ) ಮೂಲಕ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ (ಅಲ್ಪಸಂಖ್ಯಾತರ ಜನಾಂಗಗಳಾದ ಮುಸ್ಲಿಂ-2ಬಿ, ಕ್ರಿಶ್ಚಿಯನ್, ಜೈನ್, ಸಿಟ್ ಪಾರ್ಟಿ, ಬೌದ್ಧ  ಹಾಗೂ ಇತರೆ ಜನಾಂಗ ಗಳಾದ ಪ್ರವರ್ಗ-1, 2ಎ, 3ಎ, 3ಬಿ, ಮತ್ತು ಪ. ಜಾ, ಪ. ಪಂ. ) ಈ ಜನಾಂಗಳಿಗೆ  ಸೇರಿದ ಹೊಸ ವಿದ್ಯಾರ್ಥಿಗಳು ಕೂಡಲೆ ಆನ್‌ಲೈನ್ ಮೂಲಕ ಪ್ರವೇಶವನ್ನು ಪಡೆದುಕೊಳ್ಳಬೇಕು.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ  ಮುಸ್ಲಿಂ 2ಬಿ, ಕ್ರಿಶ್ಚಿಯನ್, ಜೈನ್, ಸಿಖ್ ಪಾರ್ಸಿ, ಬೌದ್ಧ ಹಾಗೂ ಇತರೆ 2.50 ಲಕ್ಷ ರೂ. ಗಳ ಒಳಗಿರಬೇಕು. ವಿದ್ಯಾಥಿಗಳು ಆನ್ ಲೈನ್ .karnataka.gov.in/mwd ನಲ್ಲಿ  2026ರ ಜೂನ್ 15ರ ಒಳಗೆ ಅರ್ಜಿಸಲ್ಲಿಸಬೇಕು. ವಿದ್ಯಾರ್ಥಿಗಳು ಆನ್ ಲೈನ್ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾಥಿಗಳಿಗೆ 2026ರ ಜೂನ್ 30ರ ಒಳಗೆ ಅರ್ಜಿ ಸಲ್ಲಿಸಬೇಕು

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ  ವಿವರ ಮತ್ತು ಸರ್ಕಾರ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ mwd.karnataka.gov.ಇನ್ ಭೇಟಿ ನೀಡಬೇಕು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವಸತಿ ನಿಲಯಗಳಿಗೆ ಅಥವಾ ತಾಲೂಕ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ಬೀದರೆಗೆ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8277799990, 08482-224150 ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology