ರಾಜ್ಯದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ , ಮತ್ತು ಪಾರ್ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದ.ಕ ಜಿಲ್ಲೆಯಲ್ಲಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಿಗೆ ಶೈಕ್ಷಣಿಕ ವರ್ಷ 2025-26ನೇ ಸಾಲಿನಲ್ಲಿ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ”ಸೇವಾ ಸಿಂಧು ಪೋರ್ಟಲ್” ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ವಸತಿ ಶಾಲೆಗಳ ವಿವರ: ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಅಸೈಗೋಳಿ ಉಳ್ಳಾಲ , (ಆಂಗ್ಲ ಮಾಧ್ಯಮ,ಪಠ್ಯಕ್ರಮ-ಸಿ.ಬಿ.ಎಸ್.ಇ) , ಸರಕಾರಿ ಮುಸ್ಲಿಂ ವಸತಿ ಶಾಲೆ ಅಸೈ ಮದಕ (ಆಂಗ್ಲ ಮಾಧ್ಯಮ,ಪಠ್ಯಕ್ರಮ -ರಾಜ್ಯ.)
ವಸತಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳು:-ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ,ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ, ಪಠ್ಯ ಪುಸ್ತಕ ಮತ್ತು ಲೇಖನ ಸಾಮಾಗ್ರಿ ನೀಡಲಾಗುತ್ತಿದೆ. ಸದರಿ ಶಾಲೆಗಳಲ್ಲಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಾಗ್ರಿ, ಗ್ರಂಥಾಲಯಗಳ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನ. ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೇರವಾಗಿ ಅಥವಾ ಹತ್ತಿರದ ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನ. ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೇರವಾಗಿ ಅಥವಾ ಹತ್ತಿರದ ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಪಾಂಡೇಶ್ವರ ಓಲ್ಡ್‌ಕೆಂಟ್ ರೋಡ್‌ನಲ್ಲಿರುವ ಇಲಾಖೆಯ ಕಚೇರಿಯನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…