|

ಅಲ್ಪಸಂಖ್ಯಾತರ ಸಮುದಾಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.27.ಜೂನ.26: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
 ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ಎಸ್.ಎಸ್.ಪಿ https://ssp.karnataka.gov.in ಪೋರ್ಟಲ್‌ನಲ್ಲಿ 2026-27ನೇ ಸಾಲಿನ ಮೆಟ್ರಿಕ್ ಪೂರ್ವ 1 ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಜನಾಂಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

 ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭವಾಗಿದ್ದು, 2026ರ ಸೆಪ್ಟೆಂಬರ್ 30 ಕೊನೆಯದಿನವಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿರಬೇಕು. ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ ಅಥವಾ ಪಾಲಕರ ಅಥವಾ ಪೋಷಕರ ವಾರ್ಷಿಕ ಆದಾಯವು 1 ಲಕ್ಷ ಮೀರಿರಬಾರದು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸಬೇಕು. 2025-26ನೇ ಸಾಲಿನಲ್ಲಿ ಅನುಮೋದನೆಗೊಂಡ ಅರ್ಜಿಗಳು ಹಾಗೂ ವಿದ್ಯಾರ್ಥಿವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳನ್ನು ಅಟೋ ರಿನೆವಲ್ (Auto Renewal) ಎಂದು ಪರಿಗಣಿಸಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸಬೇಕು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಪೂರ್ವದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿ ಅಥವಾ ಎನ್.ಪಿ.ಸಿ.ಐ ಮ್ಯಾಪಿಂಗ್ ಆ್ಯಕ್ಟೀವ್ ಆಗಿರುವ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಈ ಯೋಜನೆಯ ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂ ಮಾರ್ಗ ಸೂಚಿಗಳಿಗೆ ಒಳಪಟ್ಟಿರುತ್ತದೆ.

 ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ https://dom.karnataka.gov.in ಅನ್ನು ವೀಕ್ಷಿಸಬಹುದು ಹಾಗೂ ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ (08539-225070) ಮೌಲಾನಾ ಅಜಾದ್ ಭವನ ಹೊಸಪೇಟೆ ರಸ್ತೆ ಕೊಪ್ಪಳ ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕುಷ್ಟಗಿ. (8861610578) ಕಛೇರಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಕೊಪ್ಪಳ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳಾದ ರವಿ ಪೂಜಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *