ಬೀದರ.24.ಜುಲೈ.25:- ಮೊಬೈಲ್ ಬಳಕೆ ಪ್ರಾರಂಭವಾದ ನಂತರ ನಮ್ಮ ಜಾನಪದ ಮೂಲ ಸಂಸ್ಕøತಿ ಮರೆತು ಹೋಗಿದೆ. ಮಕ್ಕಳಿಗೆ ಶಾಲೆಯಲ್ಲಿ ಗುರುಗಳು, ಮನೆಯಲ್ಲಿ ಪಾಲಕರು ಮಕ್ಕಳ ಭವಿಷ್ಯದ ಹಿತದೃಷ್ಠಿಯಿಂದ ಕಾರ್ಯಪ್ರವೃತ್ತರಾಗಬೇಕು. ಮಕ್ಕಳಿಗೆ ಉತ್ತಮವಾದ ರೀತಿಯ ಸಂಸ್ಕøತಿಯನ್ನು ಕಲಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದರು.
ಅವರು ಬುಧುವಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೀದರ ಹಾಗೂ ಸೆಂಟ್ ಜೋಸೆಫ್ ಕನ್ನಡ ಮಾಧ್ಯಮ ಪ್ರೌಢ ಶಾಲೆ ಬೀದರ ಇವರುಗಳ ಸಂಯುಕ್ತಾಶ್ರಯದಲ್ಲಿ ಸೆಂಟ್ ಜೋಸೆಫ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಸಭಾಣಂಗಣದಲ್ಲಿ ಹಮ್ಮಿಕೊಂಡಿದ್ದ ಚಿಗುರು ಬಾಲ ಪ್ರತಿಭೆಗಳ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಬೀದರ ಅಪರ ಜಿಲ್ಲಾಧಿಕಾರಿಗಳಾದ ಸುರೇಖಾ ಮಾತನಾಡಿ, ಮಕ್ಕಳು ದೇಶದ ಸಂಪತ್ತು ಮಕ್ಕಳು ದೇಶಿ ಕಲೆಗಳತ್ತ ಗಮನ ಹರಿಸಬೇಕು, ಸಂಗೀತದಿಂದ ಮಾನಸಿಕ ನೆಮ್ಮದಿ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳು ಸಂಗೀತ, ನೃತ್ಯ, ಜಾನಪದ ಕಲೆ ಮುಂತಾದವುಗಳಲ್ಲಿ ಓದಿನ ಜೊತೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಪ್ರಾಸ್ತಾವಿಕ ಮಾತನಾಡಿ, ಜಿಲ್ಲೆಯ ಚಿಗುರು ಕಾರ್ಯಕ್ರಮದಲ್ಲಿ 08 ರಿಂದ 14 ವರ್ಷ ವಯೋಮಾನದ ಪ್ರತಿಭಾವಂತ ಮಕ್ಕಳಿಗೆ ಅವಕಾಶ ನೀಡಲಾಗುವುದು. ಕಲೆ ಉಳಿಸಿ ಕಲೆ ಬೆಳೆಸುವ ನಿಟ್ಟಿನಲ್ಲಿ ಇಲಾಖೆಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ಜಾನಪದ ಅಕಾಡೆಮಿ ವಿಜಯಕುಮಾರ ಸೋನಾರೆ ಮಾತನಾಡಿ, ಮಕ್ಕಳು ಇವತ್ತು ಪಾರಂಪಾರಿಕ ವಾದ್ಯಪರಿಕರಗಳನ್ನು ಬಳಸಿ ಸಂಗೀತ ವಿದ್ಯೆಯಬೇಕೆಂದು ತಿಳಿಸಿದರು.
ಚಿಗುರು ಕಾರ್ಯಕ್ರಮದಲ್ಲಿ ವಾದ್ಯಸಂಗೀತ ಕು.ಪ್ರತೀಕ ಸ್ವಾಮಿ ಮತ್ತು ತಂಡ, ಕು.ವೇದಾ ಮತ್ತು ತಂಡ, ಸುಗಮ ಸಂಗೀತ ಕು. ಪ್ರತೀಕ್ಷಾ ಮತ್ತು ತಂಡ ಸಮೂಹ ನೃತ್ಯ ಕು.ವಿದ್ವಾನ ಮತ್ತು ತಂಡ ಜಾನಪದ ಗಾಯನ ಕು.ಭಾಗ್ಯಲಕ್ಷ್ಮೀ ಮತ್ತು ತಂಡ ಕು.ಯುಕ್ತ ಅರಳಿ ಮತ್ತು ತಂಡ ಏಕಪಾತ್ರ ಅಭಿನಯ ಪಾತ್ರ ಕು.ದಿವ್ಯಾ (ಅಕ್ಕ ಮಹಾದೇವಿ ಪಾತ್ರ) ನಾಟಕ ಕು.ದೃಷ್ಠಿ ಮತ್ತು ತಂಡ ಚಿಟಗುಪ್ಪಾ ಅಂಗುಲಿಮಾಲಾ ಮನ ಪರಿವತನೆ ಕಲಾ ಪ್ರದರ್ಶನಗಳು ನೀಡಿದರು.
ಈ ಕಾರ್ಯಕ್ರಮದಲ್ಲಿ ಬೀದರ ಸೆಂಟ್ ಜೋಸೆಫ್ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಫಾದರ ವಿಲ್ಸನ್ ಫರ್ನಾಂಡೀಸ್, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ, ಕರ್ನಾಟಕ ಜಾನಪದ ಅಕಾಡೆಮಿ ವಿಜಯಕುಮಾರ ಸೋನಾರೆ, ಬೀದರ ಜಿಲ್ಲೆಯ ಹಿರಿಯ ಜಾನಪದ ಕಲಾವಿದ ಶಂಭುಲಿಂಗ ವಾಲ್ದೊಡ್ಡಿ, ಪಶು ವೈದ್ಯಾಧಿಕಾರಿ ಗೌತಮ ಅರಳಿ, ಬಸವರಾಜ ಮೂಲಗೆ, ದೇವಿದಾಸ ಜೋಶಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಿಬ್ಬಂದಿಗಳು, ಸೆಂಟ್ ಜೋಸೆಫ್ ಸಂಯುಕ್ತ ಪ.ಪೂ ಮಹಾವಿದ್ಯಾಲಯ ಬೀದರನ ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…