ಆಗಸ್ಟ್ 1 ರಂದು ಕೊಪ್ಪಳದಲ್ಲಿ ವ್ಯಸನ ಮುಕ್ತ ದಿನಾಚರಣೆ

ಕೊಪ್ಪಳ.31.ಜುಲೈ.25:- ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ತರಬೇತಿ ಕೇಂದ್ರ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಇವರ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 1 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಲಾಗಿದೆ.


ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.


ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ್ ನಬೀಬ್ ಸಾಬ್ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ ಮತ್ತು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಭಾಗವಹಿಸುವರು.


ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್ ಅವರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಮಂಗಳೂರು ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭುರಾಜ ಕೆ. ನಾಯಕ್ ಅವರು ವಿಶೇಷ ಉಪನ್ಯಾಸ ನೀಡುವರು.


ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಉಪಸ್ಥಿತರಿರುವರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಡಾ. ಜಿ.ಸುರೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

2 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

8 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

8 hours ago

ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ಸ   ಸನ್ಮಾನಿಸಿದರು

ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…

8 hours ago

ಕೇಂದ್ರ ಸಚಿವ ಗಡ್ಕರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…

8 hours ago

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…

14 hours ago