01/08/2025 7:23 AM

Translate Language

Home » ಲೈವ್ ನ್ಯೂಸ್ » ಆಗಸ್ಟ್.1 ರಿಂದ 7 ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ

ಆಗಸ್ಟ್.1 ರಿಂದ 7 ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ

Facebook
X
WhatsApp
Telegram

ಬೀದರ.30.ಜುಲೈ.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು ಬೆಂಬಲಿಸಲು “ತಾಯಿಯ ಹಾಲು ನೀಡುವುದರಲ್ಲಿ ಹೂಡಿಕೆ ಮಾಡಿದರೆ ಮಕ್ಕಳ ಆರೋಗ್ಯಕರ ಭವಿಷ್ಯಕ್ಕಾಗಿ ಹೂಡಿಕೆ ಮಾಡಿದಂತೆ (Invest in breastfeeding, invest in future)” ” ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ಆಗಸ್ಟ್.1 ರಿಂದ 7 ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ-2025 ಎಲ್ಲೆಡೆ ಜಾಗತಿಕ ಅಭಿಯಾನವಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಗು ಜನಿಸಿದ ಒಂದು ಗಂಟೆಯೊಳಗೆ ಸ್ತನ್ಯಪಾನ ಮಾಡಿಸುವುದು ಕೊಲೊಸ್ಟ್ರೋಮ್ ಸೇವನೆಯ ಪ್ರಾಮುಖ್ಯತೆ ಹಾಗೂ ಮೊದಲ ಆರು ತಿಂಗಳ ವರೆಗೆ ಕಡ್ಡಾಯ ಸ್ತನ್ಯಪಾನ ಮಾಡುವುದರಿಂದ ಆರಂಭಿಕ ಬಾಲ್ಯದ ಬೆಳವಣಿಗೆ ಹೆಚ್ಚಿಸಲು ಮತ್ತು ಪೌಷ್ಟಿಕಾಂಶವನ್ನು ಸುಧಾರಿಸಲು ಹಾಗೂ ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡಲು ಸ್ತನ್ಯಪಾನ ಮಾಡಿಸುವುದು ಬಹಳ ಮುಖ್ಯವಾಗಿರುತ್ತದೆ. ಎಲ್ಲರೂ ಎಚ್ಚೆತ್ತುಕೊಂಡು ಎದೆಹಾಲಿನ ಮಹತ್ವದ ಬಗ್ಗೆ ಅರಿತುಕೊಂಡು ಎಲ್ಲಾ ತಾಯಂದಿರು ಹಾಗೂ ಗರ್ಭಿಣಿಯರು ಕನಿಷ್ಟ ಎರಡು ವರ್ಷದವರೆಗೆ ಸ್ತನ್ಯಪಾನ ಮಾಡಿಸಬೇಕು.

ಮಗುವಿಗೆ ಸ್ತನ್ಯಪಾನ ಮಾಡಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಿಗೆ ಆಗುವುದರಿಂದ ಅನೇಕ ಮಾರಕ ರೋಗಗಳು ಬರದಂತೆ ಮಗುವಿಗೆ ರಕ್ಷಣೆ ಸಿಗುತ್ತದೆ. ಮಗುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಹೆಚ್ಚಾಗುತ್ತದೆ ಹಾಗೂ ಅಪೌಷ್ಟಿಕತೆಯನ್ನು ತಡೆಗಟ್ಟುತ್ತದೆ. ತಾಯಿ ಮತ್ತು ಮಗುವಿನ ಮಧ್ಯೆ ಆತ್ಮೀಯ ಪ್ರೀತಿ ವಾತ್ಸಲ್ಯ ಹೆಚ್ಚಾಗಿ ಬಾಂಧವ್ಯ ಬೆಳೆಯುತ್ತದೆ. ತಾಯಿಯು ಮಗುವಿಗೆ ಸ್ತನ್ಯಪಾನ ಮಾಡಿಸುವುದರಿಂದ ಸ್ತನ ಕ್ಯಾನ್ಸರ್ ತಡೆಗಟ್ಟುತ್ತದೆ, ದೇಹದಲ್ಲಿಯ ಬೊಜ್ಜು ಕರಗುತ್ತದೆ, ತಾಯಿಯು ನಿರಂತರವಾಗಿ ಸ್ತನ್ಯಪಾನ ಮಾಡಿಸುವುದರಿಂದ ತಾತ್ಕಾಲಿಕ ಗರ್ಭನಿರೋಧಕವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!