ಕೊಪ್ಪಳ.08.ಆಗಸ್ಟ್.25: ಕರ್ನಾಟಕ ಮುಕ್ತ ಶಾಲೆ–ಕೆ.ಓ.ಎಸ್ ಪೂರಕ ಪರೀಕ್ಷೆಗಳು ಆಗಸ್ಟ್ 11ರಿಂದ ಕೊಪ್ಪಳದ ಮುನಿರಾಬಾದ್‌ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಪಿ.ಎಸ್.ಟಿ.ಇ ವಿಭಾಗ) ಡಯಟ್ ಕೇಂದ್ರದಲ್ಲಿ ನಡೆಯಲಿದ್ದು, ಸುಗಮ ಮತ್ತು ಶಾಂತಿಯುತವಾಗಿ ಪರೀಕ್ಷೆ ನಡೆಯುವ ಉದ್ದೇಶದಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.
ಕೆ.ಓ.ಎಸ್ ಪೂರಕ ಪರೀಕ್ಷೆಗಳು ಆಗಸ್ಟ್ 11 ರಿಂದ ಆ. 18 ರವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳದ ಮುನಿರಾಬಾದ್‌ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಪಿ.ಎಸ್.ಟಿ.ಇ ವಿಭಾಗ) ಡಯಟ್ ಕೇಂದ್ರದಲ್ಲಿ ಜರುಗಲಿದ್ದು, ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಜರಾಕ್ಸ್, ಟೈಪಿಂಗ್ ಸೆಂಟರ್‌ಗಳನ್ನು ನಿಷೇಧಿಸಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರವನ್ನು ಹೊಂದಿದ ಅಭ್ಯರ್ಥಿಗಳು, ನಿಯೋಜಿತ ಶಿಕ್ಷಕರು ಹಾಗೂ ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ.
ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಕೊಪ್ಪಳ.08.ಆಗಸ್ಟ್.25: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳಿಗೆ…
ಕೊಪ್ಪಳ.08.ಆಗಸ್ಟ್.25: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಧನಂಜಯ ಮಠದ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ…
ಕೊಪ್ಪಳ.08.ಆಗಸ್ಟ್.25: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಗಳು ಬೇಕಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆಯ…
ಕೊಪ್ಪಳ.08.ಆಗಸ್ಟ್.25: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರು ಆಗಸ್ಟ್ 9 ರಂದು ಶನಿವಾರ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ…
ಬೆಂಗಳೂರು.08.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಪರವಾಗಿ ವಿಶೇಷ ಕಾನೂನು ನಿಯಮಾವಳಿ ರೂಪಿಸಿ ಯುಜಿಸಿ ಮತ್ತು…
ಹೊಸ ದೆಹಲಿ.08.ಆಗಸ್ಟ್.25:- ದೇಶದಲ್ಲಿ ರಸ್ತೆ ಮತ್ತು ಸಾರಿಗೆ ಮೂಲಸೌಕರ್ಯಗಳು ವಿಶ್ವ ದರ್ಜೆಯ ಮಟ್ಟಕ್ಕೆ ಏರುತ್ತಿವೆ, ಇದರಿಂದಾಗಿ ಪ್ರಯಾಣದ ಸಮಯ ಕಡಿಮೆಯಾಗುತ್ತದೆ…