ರಾಯಚೂರು.09.ಆಗಸ್ಟ್.25.: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಪುರುಷರು ಹಾಗೂ ಮಹಿಳೆಯರಿಗಾಗಿ ಲಿಂಗಸೂಗೂರು ತಾಲ್ಲೂಕಿನಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ.
ದಸರಾ ಕ್ರೀಡಾಕೂಟವು ಆಗಸ್ಟ್ 12ರ ಬೆಳಿಗ್ಗೆ 9ಗಂಟೆಗೆ ಲಿಂಗಸುಗೂರು ತಾಲೂಕು ಹೊರಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ತಾಲ್ಲೂಕ ಮಟ್ಟದ ಆಯ್ಕೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ಪ್ರಯಾಣ ಭತ್ಯೆ ಹಾಗೂ ದಿನಭತ್ಯೆ ನೀಡುವುದಿಲ್ಲ. ತಾಲ್ಲೂಕ ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಪುರುಷ ಕ್ರೀಡಾಪಟುಗಳಿಗೆ ಮಾತ್ರ ಪ್ರಯಾಣ ಭತ್ಯೆ ಹಾಗೂ ದಿನಭತ್ಯೆಯನ್ನು ಖಜಾನೆ-2ರ ಮೂಲಕ ಕ್ರೀಡಾಪಟುಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು.
ಪ್ರತೀ ವಿಜೇತ ಕ್ರೀಡಾಪಟುಗಳು ಆಧಾರ್ ಕಾರ್ಡ್ ವೈಯಕ್ತಿಕ ಹಾಗೂ ಗುಂಪು ತಂಡ ವಿವರ ಹಾಗೂ ತಂಡದ ನಾಯಕರ ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಹಾಗೂ ಮೊಬೈಲ್ ನಂಬರ್ ಅನ್ನು ಕಡ್ಡಾಯವಾಗಿ ನೊಂದಾವಣೆ ರಜಿಸ್ಟರ್‌ನಲ್ಲಿ ಒದಗಿಸತಕ್ಕದ್ದು, ಸಲ್ಲಿಸದೇ ಇರುವ ಕ್ರೀಡಾಪಟುಗಳು ಪ್ರಯಾಣ ಭತ್ಯೆ ಹಾಗೂ ದಿನಭತ್ಯೆ ಪಾವತಿ ಮಾಡಲಾಗುವುದಿಲ್ಲ. ಅದಕ್ಕೆ ತಾವೇ ನೇರ ಹೊಣೆಗಾರರು. ಯಾವುದೇ ರೀತಿಯ ನಗದು ಹಣ ನೀಡುವುದಿಲ್ಲ. ವಿಶೇಷ ಸೂಚನೆ ಸರ್ಕಾರದ ಶಕ್ತಿ ಯೋಜನೆ ಜಾರಿಯಲ್ಲಿರುವುದರಿಂದ ಮಹಿಳಾ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆಯನ್ನು ಪಾವತಿ ಮಾಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದಸರಾ ಕ್ರೀಡಾಕೂಟದ ಸಂಘಟಿಕರಾದ ಸುನೀಲ್ ಮೊಬೈಲ್ ಸಂಖ್ಯೆ: 8971828923ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.