ಆಗಸ್ಟ್ 12ರಂದು ಲಿಂಗಸುಗೂರಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ


ರಾಯಚೂರು.09.ಆಗಸ್ಟ್.25.: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಪುರುಷರು ಹಾಗೂ ಮಹಿಳೆಯರಿಗಾಗಿ ಲಿಂಗಸೂಗೂರು ತಾಲ್ಲೂಕಿನಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ.

ದಸರಾ ಕ್ರೀಡಾಕೂಟವು ಆಗಸ್ಟ್ 12ರ ಬೆಳಿಗ್ಗೆ 9ಗಂಟೆಗೆ ಲಿಂಗಸುಗೂರು ತಾಲೂಕು ಹೊರಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ತಾಲ್ಲೂಕ ಮಟ್ಟದ ಆಯ್ಕೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ಪ್ರಯಾಣ ಭತ್ಯೆ ಹಾಗೂ ದಿನಭತ್ಯೆ ನೀಡುವುದಿಲ್ಲ. ತಾಲ್ಲೂಕ ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಪುರುಷ ಕ್ರೀಡಾಪಟುಗಳಿಗೆ ಮಾತ್ರ ಪ್ರಯಾಣ ಭತ್ಯೆ ಹಾಗೂ ದಿನಭತ್ಯೆಯನ್ನು ಖಜಾನೆ-2ರ ಮೂಲಕ ಕ್ರೀಡಾಪಟುಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು.

ಪ್ರತೀ ವಿಜೇತ ಕ್ರೀಡಾಪಟುಗಳು ಆಧಾರ್ ಕಾರ್ಡ್ ವೈಯಕ್ತಿಕ ಹಾಗೂ ಗುಂಪು ತಂಡ ವಿವರ ಹಾಗೂ ತಂಡದ ನಾಯಕರ ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಹಾಗೂ ಮೊಬೈಲ್ ನಂಬರ್ ಅನ್ನು ಕಡ್ಡಾಯವಾಗಿ ನೊಂದಾವಣೆ ರಜಿಸ್ಟರ್‌ನಲ್ಲಿ ಒದಗಿಸತಕ್ಕದ್ದು, ಸಲ್ಲಿಸದೇ ಇರುವ ಕ್ರೀಡಾಪಟುಗಳು ಪ್ರಯಾಣ ಭತ್ಯೆ ಹಾಗೂ ದಿನಭತ್ಯೆ ಪಾವತಿ ಮಾಡಲಾಗುವುದಿಲ್ಲ. ಅದಕ್ಕೆ ತಾವೇ ನೇರ ಹೊಣೆಗಾರರು. ಯಾವುದೇ ರೀತಿಯ ನಗದು ಹಣ ನೀಡುವುದಿಲ್ಲ. ವಿಶೇಷ ಸೂಚನೆ ಸರ್ಕಾರದ ಶಕ್ತಿ ಯೋಜನೆ ಜಾರಿಯಲ್ಲಿರುವುದರಿಂದ ಮಹಿಳಾ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆಯನ್ನು ಪಾವತಿ ಮಾಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ದಸರಾ ಕ್ರೀಡಾಕೂಟದ ಸಂಘಟಿಕರಾದ ಸುನೀಲ್ ಮೊಬೈಲ್ ಸಂಖ್ಯೆ: 8971828923ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಆಧುನಿಕ ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…

4 hours ago

ರಾಷ್ಟ್ರೀಯ ಲೋಕ ಆದಾಲತ್‌ನ ಪೂರ್ವಭಾವಿ ಸಭೆ ಅಗಸ್ಟ್.7ರಿಂದ

ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…

4 hours ago

ತೋಟಗಾರಿಕೆ ದಿನಾಚರಣೆಗೆ ಸಿಇಓ ಡಾ.ಗಿರೀಶ ಬದೋಲೆ ಚಾಲನೆ

ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…

4 hours ago

ರಾಜ್ಯ ಶಿಕ್ಷಣ ನೀತಿ’ ಆಯೋಗ ಶಿಫಾರಸು : ಬೋರ್ಡ್ ಶಾಲೆಗಳಲ್ಲಿ `ಕನ್ನಡ ಬೋಧನೆ’ ಕಡ್ಡಾಯ

ಬೆಂಗಳೂರು.09.ಆಗಸ್ಟ್.25:-: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ತನ್ನದೇ ಆದಂತ ಶಿಕ್ಷಣ ನೀತಿಯನ್ನು ರೂಪಿಸುವ ಬಗ್ಗೆ ನಿರ್ಧಾರವನ್ನು ಪ್ರಕಟಿಸಲಾಗಿತ್ತು. ಆ ಬಗ್ಗೆ ಅಧ್ಯಯನ…

4 hours ago

ರಾಕಿ ಕಟ್ಟುವ ಸಹೋದರಿಯರಿಗೆ ಹೆಲ್ಮೇಟ ವಿತರಣೆ

ಬೀದರ.09.ಆಗಸ್ಟ್.25:- ಸಹೋದರ ಸಹೋದರಿಯರ ಸಂಬoಧವನ್ನು ಗಟ್ಟಿಗೊಳಿಸುವ ರಕ್ಷಾ ಬಂಧನ ಹಬ್ಬ ಮತ್ತೆ ಬಂದಿದೆ. ರಾಕಿ ಕಟ್ಟುವ ಸಹೋದರಿಯರಿಗೆ ಉಡುಗೊರೆಯಾಗಿ ಹೆಲ್ಮೇಟಗಳನ್ನು…

6 hours ago

ಗೃಹಲಕ್ಷ್ಮೀ ಯೋಜನೆಯ ಮೂರನೇ ಕಂತಿನ ಹಣ ಬಿಡುಗಡೆ: ಪಾಮಯ್ಯ ಮುರಾರಿ

ರಾಯಚೂರು.09.ಆಗಸ್ಟ್.25: ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 2025-26ನೇ ಸಾಲಿನ ಮೂರನೇ ಕಂತಿನ ಅನುದಾನವು ಜಿಲ್ಲೆಯ 2,61,618 ಫಲಾನುಭವಿಗಳಿಗೆ…

7 hours ago