ಕೊಪ್ಪಳ25.ಜುಲೈ.25: ಡಿ.ಇಎಲ್.ಇಡಿ ಪರೀಕ್ಷೆಗಳು ಆಗಸ್ಟ್ 2 ರಿಂದ ಆ.12ರ ವರೆಗೆ ಮುನಿರಾಬಾದ್‌ನಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸುರೇಶ ಬಿ. ಹಿಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.
ಡಿ.ಇಎಲ್.ಇಡಿ ಪರೀಕ್ಷೆಗಳು ಆಗಸ್ಟ್ 2 ರಿಂದ ಆ.12ರ ವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುನಿರಾಬಾದ್‌ನಲ್ಲಿರುವ ಕೊಪ್ಪಳ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪಿ.ಎಸ್.ಟಿ.ಇ ವಿಭಾಗದಲ್ಲಿ ಜರುಗಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…