|

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿಶೇಷ ಚೇತನರಿಗಾಗಿ ನೇರ ಸಂದರ್ಶನ ಆಯೋಜನೆ ಮಾಡಿಲಾಗಿದ್ದು, ಆಸಕ್ತರು ಭಾಗಹಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ನೇರ ಸಂದರ್ಶನವನ್ನು ಎರಡು ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಆಯೋಜನೆ ಮಾಡಲಾಗಿದ್ದು, ತಮ್ಮ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿದ್ದಾರೆ.


18 ರಿಂದ 35 ವರ್ಷಗಳವರೆಗಿನ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಎಲ್ಲಾ ಪದವೀಧರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ವಿದ್ಯಾರ್ಹತೆಯ ಅಂಕ ಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ಬಯೋಡಾಟಾ, ಆಧಾರ್ ಕಾರ್ಡ್ ಪ್ರತಿ ಹಾಗೂ ಭಾವಚಿತ್ರಗಳೊಂದಿಗೆ ಆಗಮಿಸಬೇಕು.
ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ, ಬದಲಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಈ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 08532-231684, 8095125775, 9008211750, 7795195171ಗೆ ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ನವೀನ ಕುಮಾರ್ ಸಂಗೇಪಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *