ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ.
ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕರ ವಸತಿ ಸಮುಚ್ಚಯ ನಿರ್ಮಾಣದ ಶಂಕುಸ್ಥಾಪನೆ ಸಮಾರಂಭ ಆಗಸ್ಟ್ 6ರ ಮಧ್ಯಾಹ್ನ 12 ಗಂಟೆಗೆ ಹಟ್ಟಿ ಚಿನ್ನದ ಗಣಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಸನ್ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಘನ ಉಪಸ್ಥಿತಿ ವಹಿಸುವರು.
ಮುಖ್ಯ ಅತಿಥಿಗಳಾಗಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಇಲಾಖೆಯ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ಕ್ಷೇತ್ರದ ಶಾಸಕರಾದ ಜೆ.ಟಿ.ಪಾಟೀಲ್ ಅವರು ಉಪಸ್ಥಿತರಿರುವರು.
ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಗೌರವಾನ್ವ ಉಪಸ್ಥಿತಿ ವಹಿಸುವರು.
ಲಿಂಗಸುಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ.ವಜ್ಜಲ್ ಅವರು ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್. ಶಿವರಾಜ ಪಾಟೀಲ್, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ ಅವರು ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಷಿ, ಚಂದ್ರಶೇಖರ್ ಬಿ.ಪಾಟೀಲ್, ಶರಣಗೌಡ ಪಾಟೀಲ್ ಬಯ್ಯಾಪುರ, ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಹಟ್ಟಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಎಂ.ಡಿ. ಸಮ್ದಾನಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ, ಲಿಂಗಸುಗೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವೆಂಕಟೇಶ್ ಆರ್.ಗುತ್ತೇದಾರ ಅವರು ಉಪಸ್ಥಿತಿರುವರು.
ಆರ್ಥಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಿತೇಶಕುಮಾರ ಸಿಂಗ್, ಸರ್ಕಾರದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಮ್ಲಾನ್ ಆದಿತ್ಯ ಬಿಸ್ವಾಸ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಸಮೀರ್ ಶುಕ್ಲಾ, ಕಲಬುರಗಿ ವಿಭಾಗದ ಆಯುಕ್ತರಾದ ಶ್ರೀಮತಿ ಜಹೀರಾ ನಸೀಮ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ, ಲೋಕೋಪಯೋಗಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಿ.ಸತ್ಯನಾರಾಯಣ, ಹಟ್ಟಿ ಚಿನ್ನದ ಗಣಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಆರ್.ಶಿಲ್ಪ, ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರಕಾಶ, ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಅಧ್ಯಕ್ಷರಾದ ಮಹಾಂತೇಶ್, ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿಯಾದ ಎಸ್.ಎಂ.ಶಫಿ ಸೇರಿದಂತೆ ಹಟ್ಟಿ ಚಿನ್ನದ ಗಣಿ ಕಂಪನಿಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮತ್ತು ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.