03/08/2025 12:05 PM

Translate Language

Home » ಲೈವ್ ನ್ಯೂಸ್ » ಆಗಸ್ಟ್ 6 ರಂದು ಜಿಲ್ಲಾಮಟ್ಟದ ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ

ಆಗಸ್ಟ್ 6 ರಂದು ಜಿಲ್ಲಾಮಟ್ಟದ ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ

Facebook
X
WhatsApp
Telegram

ಕೊಪ್ಪಳ.03.ಆಗಸ್ಟ.25:- ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಕೊಪ್ಪಳದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಬಳ್ಳಾರಿಯ ರೀಡ್ಸ್ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯವಿವಾಹ ನಿಷೇಧ, ಲಿಂಗ ತಾರತಮ್ಯ & ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಜಿಲ್ಲಾಮಟ್ಟದ ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ-2025 ಕಾರ್ಯಕ್ರಮವನ್ನು ಆಗಸ್ಟ್ 6 ರಂದು ಬೆಳಗ್ಗೆ 10 ಗಂಟೆಗೆ ಕೊಪ್ಪಳ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್. ದರಗದ ಅವರು ಕಾರ್ಯಕ್ರಮ ಉದ್ಘಾಟಿಸುವರು. ವಿಶೇಷ ಆಹ್ವಾನಿತರಾಗಿ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ಧಿ ಅವರು ಉಪಸ್ಥಿತರಿರುವರು. ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎ.ಆರ್. ಶಿವಾನಂದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರ್‌ಗೌಡ ವಿ.ರಾಮತ್ನಾಳ ಮತ್ತು ನಿಕಟಪೂರ್ವ ಸದಸ್ಯರಾದ ಡಾ. ಹೆಚ್.ಸಿ. ರಾಘವೇಂದ್ರ, ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಹಾಗೂ ಬಳ್ಳಾರಿ ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸಿ.ತಿಪ್ಪೇಶಪ್ಪ ಅವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!