ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಖಾಸಗಿ ಸಂಸ್ಥೆಗಳು ಆಗಮಿಸಿ, ತಮ್ಮಲಿರುವ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.

8ನೇ ತರಗತಿ ಮೇಲ್ಪಟ್ಟು ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬಿ.ಇ-ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಮತ್ತು ಬಿ.ಇ.-ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ ಅಭ್ಯರ್ಥಿಗಳು ಟೀಚಿಂಗ್ ಫೀಲ್ಡ್ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಲಿಚ್ಛೀಸುವ 18 ರಿಂದ 30 ವರ್ಷ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

2 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

2 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

2 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

2 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

2 hours ago

ರಾಯಚೂರ ಜಿಲ್ಲೆಯಲ್ಲಿ ಯೂರಿಯಾ’ ಡಿಎಪಿ ರಸಗೊಬ್ಬರ ಲಭ್ಯ

ರಾಯಚೂರು.05.ಆಗಸ್ಟ್.25: ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಹಂತ ಹಂತವಾಗಿ ವಿವಿಧ…

2 hours ago