ಬೆಂಗಳೂರು.05.ಜೂನ್.25:- ಆಡಳಿತ ಕಾಂಗ್ರೆಸ್ ರಾಜ್ಯ ಸರಕಾರ ಮತ್ತೆ 6 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬೇರೆ ಹುದ್ದೆಗಳಿಗೆ ವರ್ಗಾಯಿಸಿ, ಸ್ಥಳ ನಿಯುಕ್ತಿಗೊಳಿಸಿ ಸರಕಾರ ಆದೇಶಿಸಿದೆ.
ಜಗದೀಶ್ ಎಂ.ಕೆ ಅವರನ್ನು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ವ್ಯವಸ್ಥಾಪಕ ನಿರ್ದೇಶಕರಾಗಿ, ಅನಿತಾ ಸಿ. ಅವರನ್ನು ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿರ್ದೇಶಕರಾಗಿ, ನಜ್ಮಾ ಜಿ. ಅವರನ್ನು ಕೆಐಎಡಿಬಿ ಧಾರವಾಡದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ, ವಿದ್ಯಾಶ್ರೀ ಚಂದರಗಿ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಖ್ಯ ಆಡಳಿತಾಧಿಕಾರಿಯಾಗಿ, ಮಾರುತಿ ಬ್ಯಾಕೋಡ ಅವರನ್ನು ಕೆಐಎಡಿಬಿ ದಾವಣೆಗೆರೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ, ಉಮೇಶ್ ಜೆ ಅವರನ್ನು ಬಿಡಿಎ ಅಪರ ಭೂಸ್ವಾಧೀನಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
ಇತ್ತೀಚೆಗಷ್ಟೇ 11 ಐಎಎಸ್ ಅಧಿಕಾರಿಗಳ ವರ್ಗಾವಣೆ (IAS transfer) ಮಾಡಲಾಗಿತ್ತು. ಐಎಎಂ ಸ್ಪೆಷಲ್ ಆಫೀಸರ್ ಆಗಿದ್ದಂತ ಅಮಲಾನ್ ಅದಿತ್ಯ ಬಿಸ್ವಾಸ್ ಅವರನ್ನು ಪಿಡಬ್ಲ್ಯುಡಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಿದೆ.
ನವೀನ್ ರಾಜ್ ಸಿಂಗ್ ಅವರನ್ನು ಯವನಿಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದರೆ, ವಿ ಅನ್ಬುಕುಮಾರ್ ಅವರನ್ನು ಕೆ ಎಸ್ ಆರ್ ಟಿಸಿ ಎಂಡಿ ಸ್ಥಾನದಿಂದ ವರ್ಗಾವಣೆ ಮಾಡಿ ಹೌಸಿಂಗ್ ಡಿಪಾರ್ಟಮೆಂಟ್ ಸೆಕ್ರೆಟರಿ ಹಾಗೂ ವೆಟರ್ನರಿ ಸೈನ್ಸ್ ಆಂಡ್ ಫಿಷರಿಂಗ್ ಇಲಾಖೆಯ ಸೆಕ್ರೆಟರಿಯಾಗಿ ನೇಮಕ ಮಾಡಲಾಗಿದೆ.
ಸಮೀರ್ ಶುಕ್ಲ ಅವರನ್ನು ಎಂಎಸ್‌ಎಂಇ ಮತ್ತು ಮೈನಿಂಗ್ ಕಾರ್ಯದರ್ಶಿ ಹುದ್ದೆಗೆ ನೇಮಸಿದ್ದರೆ, ರಂದೀಪ್ ಚೌದರಿ ಅವರನ್ನು ಕೆಪಿಎಸ್ಸಿ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ಸೆಕ್ರೆಟರಿ ಪ್ಲಾನಿಂಗ್, ಪ್ರೋಗ್ರಾಂ ಮಾನಿಟರಿಂಗ್ ಮತ್ತು ಸ್ಟಾಟಿಟಿಕ್ಸ್ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಐಎಎಸ್ ಅಧಿಕಾರಿ ರಂದೀಪ್ ಡಿ ಅವರನ್ನು ಯವನಿಕದ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ ಎಸ್ಟಿ ವೆಲ್‌ಫೇರ್ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಪೊಮ್ಮಲ ಸುನೀಲ್ ಕುಮಾರ್ ಅವರನ್ನು ಕಂದಾಯ ಇಲಾಖೆಯ ಕಮೀಷನರ್ ಹುದ್ದೆಯಿಂದ ನೋಂದಣಿ ಮತ್ತು ಮುದ್ರಣಾಂಕ ಇಲಾಖೆಯ ಐಜಿಯಾಗಿ ನೇಮಕ ಮಾಡಲಾಗಿದೆ.
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…