ಬೀದರ.18.ಫೆಬ್ರುವರಿ.25:-ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ.ಎಸ್.ಎ.) ಜನವಾಡಾ ಶಾಲೆಯ 2025-26ನೇ ಸಾಲಿಗೆ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜನವಾಡಾ ಸರಕಾರಿ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಲ್ಲಿಸಬೇಕಾದ ದಾಖಲಾತಿಗಳ ವಿವರ:
ವಿದ್ಯಾರ್ಥಿಯ ಎಸ್.ಟಿ.ಎಸ್.ನಂಬರ್, ಜಾತಿ ಆದಾಯ ಪ್ರಮಾಣ ಪತ್ರದ ಆರ್.ಡಿ.ಸಂಖ್ಯೆ (ಪ್ರಸ್ತುತ ಚಾಲ್ತಿಯಲ್ಲಿರುವ), ವಿದ್ಯಾರ್ಥಿಯ ಆಧಾರ ಕಾರ್ಡ, ಪಾಸ್ ಪೋರ್ಟ ಸೈಜ್ ಫೋಟೋ-1, ವ್ಯಾಸಂಗ ದೃಢೀಕರಣ ಪ್ರಮಾಣ ಪತ್ರ, ವಿಶೇಷ ಮೀಸಲಾತಿ ಪ್ರಮಾಣ ಪತ್ರ (ಅಂಗವಿಕಲರಿಗೆ ಮಾತ್ರ), ಪ್ರಸ್ತುತ ಚಾಲ್ತಿಯಲ್ಲಿರುವ ಪಾಲಕರ ದೂರವಾಣಿ ಸಂಖ್ಯೆ, ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಶಾಲೆಯ ಮುಖ್ಯ ಗುರುಗಳ ಮೊಬೈಲ್ ಸಂಖ್ಯೆ, ವಾಸಸ್ಥಳ ಪ್ರಮಾಣ ಪತ್ರವನ್ನು ಬೇರೆ ತಾಲ್ಲೂಕಾ ಹಾಗೂ ಹೊರ ರಾಜ್ಯಗಳಲ್ಲಿ ಕಲಿಯುತ್ತಿರುವ ಬೀದರ ತಾಲ್ಲೂಕಿನ ನಿವಾಸಿಗಳು/ವಿದ್ಯಾರ್ಥಿಗಳು ಸಲ್ಲಿಸತಕ್ಕದ್ದು.
ಅರ್ಹರು ಅನ್‍ಲೈನ್
www.schooleducation.kar.nic,in & www.vidyavahini.karnataka.gov.in
ಮೂಲಕ ದಿನಾಂಕ: 28-02-2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.
6ನೇ ತರಗತಿಗೆ ಪ್ರವೇಶ ಪರೀಕ್ಷೆಯು ದಿನಾಂಕ: 23-03-2025 ರಂದು ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9980496932, 8970224448ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…
ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…