ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್ ಸೀಡಿಂಗ್ ಮಾಡಲು ಬಾಕಿ ಇರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಆಧಾರ್ ಸೀಡಿಂಗ್ ಮಾಡಲು ಕ್ರಮವಹಿಸುವಂತೆ ಕೋರಲಾಗಿದೆ.
ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶೇ.60 ರಿಂದ 74.99 ರವರೆಗೆ 7000 ರೂ.ಗಳು ಮತ್ತು ಶೇ.75 ಕ್ಕಿಂತ ಅಧಿಕ ಫಲಿತಾಂಶಗಳಿಸಿದ ವಿದ್ಯಾರ್ಥಿಗಳಿಗೆ 15,000 ರೂ.ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಬ್ಯಾಂಕ್ ಅಥವಾ ಪೋಸ್ಟ್ ಖಾತೆಗೆ ಆಧಾರ್‌ಸಿಂಡಿoಗ್ ಮಾಡಿಸಿದ್ದಲ್ಲಿ ನೇರವಾಗಿ ಕೇಂದ್ರ ಕಚೇರಿಯ ಮೂಲಕ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಅಥವಾ ಪೋಸ್ಟ್ ಖಾತೆಗೆ ಡಿ.ಬಿ.ಟಿ. ಮೂಲಕ ನೇರ ವರ್ಗಾವಣೆ ಮಾಡಲಾಗುತ್ತಿದೆ.
2020ರಲ್ಲಿ 245, 2021ರಲ್ಲಿ 578, 2022ರಲ್ಲಿ 496, 2023ರಲ್ಲಿ 722, 2024ರಲ್ಲಿ 333, 2025ರಲ್ಲಿ 1546 ಸೇರಿದಂತೆ ಒಟ್ಟು 3,920 ವಿದ್ಯಾರ್ಥಿಗಳು ಆಧಾರ್ ಜೋಡಣೆ ಮಾಡಿರುವುದಿಲ್ಲ. ಈ ಹಿನ್ನಲೆಯಲ್ಲಿ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್ ಸೀಡಿಂಗ್ ಮಾಡಲು ಬಾಕಿ ಇರುವ ಅರ್ಜಿಗಳಿಗೆ ಸೀಡಿಂಗ್ ಮಾಡಲು ಕ್ರಮವಹಿಸಿ ಈ ಕಚೇರಿಗೆ ವಿದ್ಯಾರ್ಥಿಯ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡನ ಪ್ರತಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…
ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…
ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…
ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…
ಬೀದರ.11.ಆಗಸ್ಟ್.25:- ಬೀದರ್ ಜಿಲ್ಲೆಯ ಔರಾದ ಬಾ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ…