ಆರೋಗ್ಯಕರ ಬದುಕಿಗೆ ಗುಣಮಟ್ಟದ ಆಹಾರ ಧಾನ್ಯ ಬಳಕೆ ಅಗತ್ಯ : ಸಚಿವ ಈಶ್ವರ್ ಖಂಡ್ರೆ.!


ಬೀದರ.09.ಫೆಬ್ರುವರಿ.25:- ಇಂದು ಬೀದರ್ ನಗರದಲ್ಲಿ ರೋಗಮುಕ್ತ ಆರೋಗ್ಯಕರ ಬದುಕಿಗೆ ಸಾವಯವ ಕೃಷಿ ಹಾಗೂ ಸಿರಿಧಾನ್ಯಗಳ ಬಳಕೆ ಅತ್ಯವಶ್ಯವೆಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ತಿಳಿಸಿದರು.


ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕೃಷಿ ಇಲಾಖೆ ಆಶ್ರಯದಲ್ಲಿ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿoದು ಆಯೋಜಿಸಲಾದ ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಧುನಿಕ ಕಾಲದಲ್ಲಿ ಎಲ್ಲೆಡೆ ಮಾಲಿನ್ಯ ಕಾಣುತ್ತಿದ್ದೇವೆ, ಪ್ರಕೃತಿ ವಿಕೋಪ, ಬರಗಾಲ, ಪ್ರವಾಹ, ಹವಮಾನ ವೈಪರಿತ್ಯ ನಂತಹ ಅಗಾಧ ಪರಿಸ್ಥಿತಿಯಲ್ಲಿ ಜನರು ಒತ್ತಡದ ಜೀವನ ಸಾಗಿಸುತ್ತಿದ್ದಾರೆ.

ವಿವಿಧ ರೋಗಗಳಿಗೆ ಅಂಟಿಕೊoಡಿದ್ದಾರೆ. ಆದ್ದರಿಂದ ಗುಣಮಟ್ಟದ ಸತ್ವಯುತ ಆಹಾರ ಧಾನ್ಯ ಬಳಕೆ ಅಗತ್ಯವಾಗಿದೆ. ಸಾರ್ವಜನಿಕರು ಸಾವಯವ ಕೃಷಿ ಹಾಗೂ ಸಿರಿಧಾನ್ಯ ಬಳಕೆಯಿಂದ ಆರೋಗ್ಯಕರ ಜೀವನ ನಡೆಸಬಹುದೆಂದು ಸಚಿವರು ನುಡಿದರು.


ಸರಕಾರವು ಈ ನಿಟ್ಟಿನಲ್ಲಿ ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಿದ್ದು ಸಿರಿಧಾನ್ಯ ಬಳಕೆಗೆ ಪ್ರಶಸ್ತö್ಯ ನೀಡಿದೆ. ಎಲ್ಲ ಜಿಲ್ಲೆಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದರು. ನಮ್ಮ ಪೂರ್ವಜರು ಪರಿಸರಪೂರಕ ಸಾವಯವ ಕೃಷಿಗೆ ಒತ್ತು ನೀಡಿದ್ದರು. ಉತ್ತಮ ಗುಣಮಟ್ಟದ ಆಹಾರ ಧಾನ್ಯ ಬಳಸುತ್ತಿದ್ದರು.

ಪೌಷ್ಠಿಕಾಂಶ ಭರಿತ ಸಿರಿಧಾನ್ಯಗಳು ಉಳಿದೆಲ್ಲ ಧಾನ್ಯಗಳಿಗಿಂತ ಶ್ರೇಷ್ಠ. ಎಲ್ಲ ಹವಾಮಾನಕ್ಕೂ ಹೊಂದಿಕೊAಡು ಬೆಳೆಯುವ, ಕೀಟ ಹಾಗೂ ರೋಗವಿಲ್ಲದೆ ರಸಾಯನಿಕ ಮುಕ್ತವಾಗಿ ಬೆಳೆದು ಉತ್ತಮ ಆರೋಗ್ಯ ನಿರ್ಮಾಣಕ್ಕೆ ಸಹಾಯವಾಗುತ್ತವೆ. ಸಿರಿಧಾನ್ಯಗಳನ್ನು ಪ್ರತಿನಿತ್ಯ ಬಳಸುವುದರಿಂದ ಅನೇಕ ರೋಗಗಳು ವಾಸಿಯಾದ ಉದಾಹರಣೆಗಳಿವೆ ಎಂದು ಸಚಿವರು ತಿಳಿಸಿದರು.


ಈಗ ಕೃಷಿ ಕ್ಷೇತ್ರವು ಕವಲು ದಾರಿಯಲ್ಲಿದೆ, ರೈತರ ಬೆಳೆಗೆ ಸರಿಯಾದ ಬೆಂಬಲ ಬೆಲೆ ದೊರೆಯಬೇಕಿದೆ, ಸ್ವಾಮಿನಾಥನ್ ಆಯೋಗದ ಪ್ರಕಾರ ವೈಜ್ಞಾನಿಕ ಬೆಲೆ ನಿಗದಿಯಾಗಬೇಕಿದೆ ಎಂದರು.


ಕೃಷಿ ಹೆಚ್ಚು ಲಾಭದಾಯಕ ಆಗುವ ನಿಟ್ಟಿನಲ್ಲಿ ರೈತರೇ ಕಾಲಕ್ಕನುಗುಣವಾಗಿ ಯಾವ ಬೆಳೆ ಬೆಳೆಯಬೇಕೆಂಬುದನ್ನು ವಿಜ್ಞಾನಿಗಳನ್ನು ಸಂಪರ್ಕಿಸಿ ಆರ್ಥಿಕವಾಗಿಯೂ ಸದೃಢವಾಗಬೇಕಿದೆ. ಸಿರಿಇಧಾನ್ಯ ಬಳಕೆಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ಸಾವಯವ ಕೃಷಿ ವಿಸ್ತರಣೆಗೆ ರೈತರು ಸಿದ್ದರಾಗಬೇಕಿದೆ. ಈ ನಿಟ್ಟಿನಲ್ಲಿ ಕೃಷಿ ಸಖಿಯರು ಗ್ರಾಮಗಳಲ್ಲಿ ಹೆಚ್ಚೆಚ್ಚು ತಿಳುವಳಿಕೆ ಮೂಡಿಸಬೇಕೆಂದು ಸಚಿವರು ತಿಳಿಸಿದರು.


ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಅವರು ಮಾತನಾಡಿ, ಸಾವಯವ ಕೃಷಿ ಮಿಷನ ರಾಜ್ಯದ ರೈತರಿಗೆ ಮತ್ತೊಮ್ಮೆ ಸಿಗುವಂತಾಲಿ. ರಾಜ್ಯದ ಎಲ್ಲಾ ರೈತರು ಸಾವಯವ ಕೃಷಿ ಬೆಳೆದು ಒಳ್ಳೆಯ ಬೆಲೆ ಸಿಗುವಂತಾಗಲಿ ಎಂದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಅಳವಡಿಸಲಾಗಿರುವ ವಿವಿಧ ಮಳಿಗೆಗಳಿಗೆ ಸಚಿವರು ಭೇಟಿ ನೀಡಿದರು.


ಈ ಕಾರ್ಯಕ್ರಮದಲ್ಲಿ ಬೀದರ ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಸಿದ್ರಾಮಯ್ಯ ಸ್ವಾಮಿ, ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಬೆಂಗಳೂರು ರಾಜ್ಯ ಪ್ರತಿನಿಧಿಯಾದ ವಿಶ್ವನಾಥ ಪಾಟೀಲ, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ ಕೆ., ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ.ಭವಾನಿ ಕೆ, ಡಾ.ಸುನಿಲಕುಮಾರ ಎನ್.ಎಮ್., ಕೃಷಿ ಇಲಾಖೆ ಉಪನಿರ್ದೇಶಕರಾದ ಸೋಮಶೇಖರ ಬಿರಾದಾರ, ಸಹಾಯಕ ನಿರ್ದೇಶಕರಾದ ಅನ್ಸಾರಿ ಸೇರಿದಂತೆ ಕೃಷಿ ಸಖಿಯರು, ರೈತ ಮುಖಂಡರು, ರೈತರು ಸೇರಿದಂತೆ ಕೃಷಿ ಇಲಾಖೆ ಸಿಬ್ಬಂದಿಗಳು ರೈತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು…

2 hours ago

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

3 hours ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

4 hours ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

4 hours ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

4 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

4 hours ago