ಬೀದರ.01.ಮಾರ್ಚ.25:- ಬೀದರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನದಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿ ದಿನಾಂಕ: 18-02-2025 ರಂದು ಸಂದರ್ಶನ ಮಾಡಿ ಮೆರಿಟ್ ಹಾಗೂ ಸಂದರ್ಶನದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕಕ್ಕೆ ಪ್ರಕಟಿಸಲಾಗಿದೆ.
ಈ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಬಯಸುವವರು ಮಾರ್ಚ.7 ರ ಸಂಜೆ 5 ಗಂಟೆಯವರೆಗೆ ತಮ್ಮ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.