ಆರೋಗ್ಯ ಇಲಾಖೆ’ಯಲ್ಲಿ ‘6770’ ಡಿ- ಗ್ರೂಪ್ ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ

ಬೆಂಗಳೂರು.03.ಜುಲೈ.25: ರಾಜ್ಯ ಸರ್ಕಾರ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ರಾಜ್ಯವಲಯದ ಆಸ್ಪತ್ರೆಗಳಲ್ಲಿ ಖಾಲಿ ಇರುವ ವಿವಿಧ ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆಯಡಿ ಭರ್ತಿ ಮಾಡಲು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

2019-20ನೇ ಸಾಲಿಗೆ ಆಸ್ಪತ್ರೆಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳಲ್ಲಿ ಶೇ.30 ರಷ್ಟು ನಾನ್-ಕ್ಲಿನಿಕಲ್ ಹಾಗೂ ಶೇ.45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ.75 ಮೀರದಂತೆ ಈ ಹಿಂದಿನ ಟೆಂಡರು ನಿಯಮಗಳನ್ನು ಪಾಲಿಸಿಕೊಂಡು ಹಾಗೂ ಹೊರಗುತ್ತಿಗೆ ಸಂಪನ್ಮೂಲದಡಿ ಟೆಂಡರ್ ಕರೆಯಲು ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಲಾಗಿದೆ

ಮೇಲೆ ಓದಲಾದ ಕ್ರಮಾಂಕ(2)ರ ಏಕ ಕಡತದಲ್ಲಿ ದಿನಾಂಕ:09.01.2025 ರಂದು ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯವಲಯದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ರೋಗಿಗಳ ಹಿತದೃಷ್ಠಿಯಿಂದ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಮತ್ತು ಸಾರ್ವಜನಿಕರಿಗೆ ಹೆಚ್ಚಿನ/ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಲು ಪ್ರಸ್ತುತ ಚಾಲ್ತಿಯಲ್ಲಿರುವ ಗ್ರೂಪ್-ಡಿ ಖಾಲಿ ಹುದ್ದೆಗಳಿಗೆ ಎದುರಾಗಿ ಪಡೆದುಕೊಳ್ಳುತ್ತಿರುವ ಶೇ 75 % ರಷ್ಟರ ಬದಲಿಗೆ ಶೇ 100% ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುವ ಬಗ್ಗೆ ಚರ್ಚಿಸಲಾಗಿರುವುದಾಗಿ ಪ್ರಸ್ತಾಪಿಸಿರುತ್ತಾರೆ.

ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಹಿನ್ನೆಲೆಯಲ್ಲಿ, 2025-26ನೇ ಸಾಲಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ರಾಜ್ಯವಲಯದ ಆಸ್ಪತ್ರೆಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳ ಪೈಕಿ ಶೇಕಡ 80 ರಷ್ಟು (80%) ಹುದ್ದೆಗಳನ್ನು ಮಾತ್ರ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಈ ಕೆಳಗಿನ ಷರತ್ತುಗಳಿಗೊಳಪಡಿಸಿ ಅನುಮತಿ ನೀಡಿ ಆದೇಶಿಸಿದೆ.

ಷರತ್ತುಗಳು:-

ಶೇಕಡ 80 ರಷ್ಟು (80%) ಹುದ್ದೆಗಳಲ್ಲಿ ಶೇ.40 ರಷ್ಟು ನಾನ್-ಕ್ಲಿನಿಕಲ್ ಹುದ್ದೆಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ (Service Contract) ಹಾಗೂ ಶೇ.40 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ (Out Source) ಭರ್ತಿ ಮಾಡಲು ಕ್ರಮವಹಿಸತಕ್ಕದ್ದು.
ಆಯುಕ್ತರು ರಾಜ್ಯವಲಯದ ಪ್ರತಿ ಕಛೇರಿ / ತಾಲ್ಲೂಕು / ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಮಾಣಿತ ಸಿಬ್ಬಂದಿ ಮಾದರಿಯನ್ನು (Standard Staffing Pattern)
ಅಳವಡಿಸಿಕೊಳ್ಳಲು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆಯನ್ನು ಪಡೆಯತಕ್ಕದ್ದು.
ಇಲಾಖೆಗೆ ಒದಗಿಸಲಾದ ಅನುದಾನದಲ್ಲಿ ಸುಮಾರು ರೂ. 50.00 ಕೋಟಿ ರೂಪಾಯಿಗಳ ಪುನರ್ವಿನಿಯೋಗಕ್ಕಾಗಿ (re-appropriation) ಗುರುತಿಸಿ ಪ್ರಸ್ತಾವನೆಯನ್ನು ಸಲ್ಲಿತಕ್ಕದ್ದು.
ಸರ್ಕಾರದ ಆದೇಶ ಸಂಖ್ಯೆ: ಆಕುಕ 81 ಹೆಚ್‌ಎಸ್‌ಎಂ 2025, ದಿನಾಂಕ: 22-5-2025 ರಲ್ಲಿನ ಮಾನದಂಡ / ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಖಾಲಿಯಿರುವ ಹುದ್ದೆಗಳ ಎದುರಾಗಿ ಗುತ್ತಿಗೆ / ಹೊರಗುತ್ತಿಗೆ ಮುಖಾಂತರ ಹುದ್ದೆಗಳನ್ನು ಭರ್ತಿ ಮಾಡತಕ್ಕದ್ದು.
ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 38 ಎಫ್.ಆರ್.ಸಿ. 2025 (1653051), ದಿನಾಂಕ: 10-06-2025 ರಲ್ಲಿ ನೀಡಿರುವ ಸಹಮತಿ ಮೇರೆಗೆ ಹೊರಡಿಸಲಾಗಿದೆ.

prajaprabhat

Recent Posts

ಜು.15 ರಿಂದ ಆರ್ಥಿಕ ಅಭಿವೃದ್ದಿ ಸುಸ್ಥಿರತೆ ಕುರಿತು ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.02.ಜುಲೈ.25:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತ ಬಾಂಧವರಿಗಾಗಿ/ಪಶುಪಾಲಕರಿಗಾಗಿ ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರನಲ್ಲಿ ವೈಜ್ಞಾನಿಕ ಪಶುಪಾಲನೆಯಿಂದ ಆರ್ಥಿಕ ಅಭಿವೃದ್ದಿ…

1 hour ago

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.03.ಜುಲೈ.25: 2025-26ನೇ ಸಾಲಿನ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ,…

1 hour ago

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ: ಅರ್ಜಿ ಆಹ್ವಾನ

ಕೊಪ್ಪಳ.04.ಜುಲೈ.25: 2025-26 ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ (ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು…

3 hours ago

ಮೃತ ಮಹಿಳೆಯ ವಾರಸುದಾರರ ಪತ್ತೆಗೆ ಮನವಿ

ಕೊಪ್ಪಳ.04.ಜುಲೈ.25: ಕೊಪ್ಪಳದ ಹುಲಿಗಿ ಹತ್ತಿರದ ಹಳೇ ನಿಂಗಾಪುರ ಗ್ರಾಮದ ಪಾಂಡುರAಗ ದೇವಸ್ಥಾನದ ಹತ್ತಿರದ ತುಂಗಭದ್ರಾ ಎಡದಂಡೆ ಕೆನಾಲ್‌ನಲ್ಲಿ ಸುಮಾರು 30…

3 hours ago

ಅಪರಿಚಿತ ಶವದ ವಾರಸುದಾರರ ಪತ್ತೆಗೆ ಮನವಿ

ಕೊಪ್ಪಳ.04.ಜುಲೈ.25: ಕೊಪ್ಪಳ ತಾಲ್ಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನದಲ್ಲಿ ಭಿಕ್ಷಾಟನೆ ನಡೆಸುತ್ತಿದ್ದ ಸುಮಾರು 35-40 ವರ್ಷದ ವ್ಯಕ್ತಿಯು 2025 ರ…

3 hours ago

ಅಪರಿಚಿತ ಶವದ ವಾರಸುದಾರರ ಪತ್ತೆಗೆ ಮನವಿ

ಕೊಪ್ಪಳ.04.ಜುಲೈ.25: ಕೊಪ್ಪಳದ ಹೊಸಪೇಟೆ ಮತ್ತು ಕೊಪ್ಪಳ ಎನ್.ಹೆಚ್.63 ರಸ್ತೆಯಲ್ಲಿ ಗಾಳೇಮ್ಮನ ಗುಡಿ ಹತ್ತಿರ 2025 ರ ಏಪ್ರಿಲ್ 18 ರಂದು…

3 hours ago