Home » ಲೈವ್ ನ್ಯೂಸ್ » ಆರೋಗ್ಯ ಇಲಾಖೆಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆರೋಗ್ಯ ಇಲಾಖೆಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Facebook
X
WhatsApp
Telegram

ರಾಯಚೂರು,09.ಜುಲೈ 26: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಅಧೀನದಲ್ಲಿ ಖಾಲಿ ಇರುವ ಫಾರ್ಮಸಿ ಅಧಿಕಾರಿಗಳು ಮತ್ತು ಕಿರಿಯ ವೈದ್ಯಕೀಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಫಾರ್ಮಸಿ ಅಧಿಕಾರಿಗಳು 8 ಹುದ್ದೆಗಳು, ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳು 19 ಹುದ್ದೆಗಳಿಗೆ
ಆಸಕ್ತರಿಂದ ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ದಿನಾಂಕ: 08-07-2026 ರಿಂದ 15-07-2026ರವರೆಗೆ ಬೆಳಿಗ್ಗೆ 10.30ಗಂಟೆಯಿAದ ಸಾಯಂಕಾಲ 5.30ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.


ಗರಿಷ್ಠ 45 ವಯೋಮತಿ ವರ್ಷದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಅನುಸರಿಸಿದಂತೆ ಫಾರ್ಮಸಿ ಅಭ್ಯರ್ಥಿಗಳು ಡಿ.ಫಾರ್ಮಾ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪರಿಗಣಿಸಲಾಗುವುದು ಮತ್ತು ಕಿರಿಯ ವೈದ್ಯಕೀಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಅಭ್ಯರ್ಥಿಗಳು ಡಿಪ್ಲೋಮಾ ಇನ್ ಲ್ಯಾಬೋರೇಟ್ರಿ ತಾಂತ್ರಿಕ ವಿದ್ಯಾರ್ಹತೆಯನ್ನು ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪರಿಗಣಿಸಲಾಗುವುದು. 1:3 ರೋಷ್ಟರ್ ಕಂ ಮೆರಿಟ್ ನಲ್ಲಿ ಅರ್ಹ ಅಭ್ಯರ್ಥಿಗಳಿಗೆ ಮತ್ತು ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ನಿಗದಿಪಡಿಸುವ ಸಮಯಕ್ಕೆ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology