ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭರ್ಜರಿ ನೇಮಕಾತಿ.

DHFWS Recruitment 2025 : ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ  ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ವಯೋಮಿತಿ, ಶೈಕ್ಷೇಣಿಕ ಅರ್ಹತೆ, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪಡೆಯಿರಿ.  ಕರ್ನಾಟಕ ಮಿದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿಯಲ್ಲಿ ಮೈಸೂರು ಜಿಲ್ಲೆಯಲ್ಲಿ ಅಗತ್ಯವಿರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಆಯ್ಕೆ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ.

ಹುದ್ದೆ : ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ, ಶುಶ್ರೂಷಕರು, ಫಿಜಿಯೋಥೆರಪಿಸ್ಟ್, ಕ್ಲಿನಿಕಲ್ ಸೈಕಲಾಜಿಸ್ಟ್, ಸ್ಪೀಚ್ ಥೆರಪಿಸ್ಟ್, ಜಿಲ್ಲಾ ಸಂಯೋಜಕರು.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮೈಸೂರು ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಗಳ ಸಂಖ್ಯೆ:


ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ 1
ಶುಶ್ರೂಷಕರು 1
ಫಿಜಿಯೋಥೆರಪಿಸ್ಟ್ 1
ಕ್ಲಿನಿಕಲ್ ಸೈಕಲಾಜಿಸ್ಟ್ 1
ಸ್ಪೀಚ್ ಥೆರಪಿಸ್ಟ್ 1
ಜಿಲ್ಲಾ ಸಂಯೋಜಕರು 1

ಶೈಕ್ಷಣಿಕ ಅರ್ಹತೆ :

• ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ – ಡಿಎಂ/ ಡಿ.ಎನ್.ಬಿ ನ್ಯೂರಾಲಜಿ, ಎಂಡಿ/ ಡಿ.ಎನ್.ಬಿ ಜನರಲ್ ಮೆಡಿಸಿನ್, ಎಂ.ಬಿ.ಬಿ.ಎಸ್.
• ಶುಶ್ರೂಷಕರು – ಬಿ.ಎಸ್ಸಿ ಇನ್ ನರ್ಸಿಂಗ್.
• ಫಿಜಿಯೋಥೆರಪಿಸ್ಟ್ – ಬಿಪಿಟಿ ಅರ್ಹತೆ.
• ಕ್ಲಿನಿಕಲ್ ಸೈಕಲಾಜಿಸ್ಟ್ – ಎಂ.ಫಿಲ್ ಇನ್ ಮೆಂಟಲ್ ಹೆಲ್ತ್.
• ಸ್ಪೀಚ್ ಥೆರಪಿಸ್ಟ್ – ಬ್ಯಾಚುಲರ್ ಇನ್ ಆಡಿಯೋಲಜಿ & ಸ್ವಿಚ್ ಲ್ಯಾಂಗ್ವೇಜ್ ಪ್ಯಾಥೋಲಜಿ.
• ಜಿಲ್ಲಾ ಸಂಯೋಜಕರು – ಸ್ನಾತಕೋತ್ತರ ಪದವಿ.

ವಯೋಮಾನ :


• ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ ಹುದ್ದೆಗೆ – ಗರಿಷ್ಠ 60 ವರ್ಷ
• ಉಳಿದ ಹುದ್ದೆಗಳಿಗೆ – ಗರಿಷ್ಠ 45 ವರ್ಷ

ವೇತನ :ಹುದ್ದೆ

ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ 60,000 – 1,50,000
ಶುಶ್ರೂಷಕರು 15,472 – 19,999
ಫಿಜಿಯೋಥೆರಪಿಸ್ಟ್ 25,000
ಕ್ಲಿನಿಕಲ್ ಸೈಕಲಾಜಿಸ್ಟ್ 26,250
ಸ್ಪೀಚ್ ಥೆರಪಿಸ್ಟ್ 30,000
ಜಿಲ್ಲಾ ಸಂಯೋಜಕರು 30,000


ಆಯ್ಕೆ ವಿಧಾನ :

ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಸಂದರ್ಶನ ಸ್ಥಳ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ನಜರಬಾದ್, ಮೈಸೂರು – 570010

ಸಂದರ್ಶನ ನಡೆಯುವ ದಿನಾಂಕದ ವಿವರ :


ನೇರ ಸಂದರ್ಶನ ನಡೆಯುವ ದಿನಾಂಕ : ಜೂನ್ 10, 2025 ರಂದು ಬೆಳಿಗ್ಗೆ 10.00 ಗಂಟೆಗೆ

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

2 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

2 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

2 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

2 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

3 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

3 hours ago