ಆರೋಗ್ಯ ಸಂಜೀವಿನಿ ಯೋಜನೆಯೆಲ್ಲಿ ಮಹತ್ವದ ಬದಲಾವಣೆ.!

ಬೆಂಗಳೂರು.29.ಮೇ25: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು, ವೈದ್ಯಕೀಯ ಹಾಜರಾತಿ ನಿಯಮಗಳು 1963 ರನ್ವಯ ರಾಜ್ಯದ  ಕೆಲವೊಂದು ಇಲಾಖೆ ಮತ್ತು ಗುಂಪುಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಅರ್ಹರಾಗಿರುತ್ತಾರೆ.

ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೋಂದಾವಣೆ ಮತ್ತು ಆಯ್ಕೆ ಕುರಿತ ಸೂಚನೆಗಳಿಗೆ ಮಾರ್ಪಾಡು ಮಾಡುವ ಬಗ್ಗೆ ಮಹತ್ವ ಮಾಹಿತಿ ಇಲ್ಲಿದೆ.

ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರಿ ನೌಕರರು ಹಾಗೂ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ಬಗ್ಗೆ ಉಲ್ಲೇಖಿತ ಸುತ್ತೋಲೆಯನ್ವಯ ನೋಂದಾವಣೆ ಮತ್ತು ಆಯ್ಕೆ ಕುರಿತು ಸೂಚನೆಗಳನ್ನು ನೀಡಲಾಗಿದೆ. ಆದರೆ, ತಾಂತ್ರಿಕ ತೊಂದರೆಯಿಂದಾಗಿ ನಿಗದಿತ ಅವಧಿಯೊಳಗೆ ನೌಕರರು ನೋಂದಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಲ್ಲಿ ಸಾಧ್ಯವಾಗದೇ ಇರುವುದರಿಂದ ಕಾಲಾವಕಾಶದ ಅವಶ್ಯಕತೆ ಇರುತ್ತದೆ. ಆದ್ದರಿಂದ ಈ ಕೆಳಕಂಡ ಅಂಶಗಳನ್ನು ಪರಿಗಣಿಸಿ ಮಾರ್ಪಾಡು ಸುತ್ತೋಲೆ ಹೊರಡಿಸಲು ತಮ್ಮಲ್ಲಿ ಕೋರಿದೆ.

ಮಾರ್ಪಾಡು ಮಾಡಬೇಕಾಗಿರುವ ಸೂಚನೆಗಳು ಇಲ್ಲಿವೆ

ಸರ್ಕಾರಿ ನೌಕರ ಯೋಜನೆಗೆ ಒಳಪಡಲು ಆಯ್ಕೆಯನ್ನು ವ್ಯಕ್ತಪಡಿಸಲು ಉದ್ದೇಶಿಸಿದಲ್ಲಿ ದಿ:20-06-2025ರೊಳಗೆ ಘೋಷಣೆಯನ್ನು ತನ್ನ ಮೇಲಾಧಿಕಾರಿಗಳ ಮೂಲಕ ಡಿ.ಡಿ.ಓ. ಗಳಿಗೆ ಸಲ್ಲಿಸತಕ್ಕದ್ದು. ಇಂತಹ ಘೋಷಣೆಯನ್ನು ಸಲ್ಲಿಸುವ ನೌಕರರಿಂದ ಯೋಜನೆಯ ವಂತಿಕೆಯನ್ನು ಜೂನ್-2025ರ ಮಾಹೆಯಿಂದ ಸ್ವಯಂಚಾಲಿತವಾಗಿ ಹೆಚ್.ಆರ್.ಎಂ.ಎಸ್.ನಲ್ಲಿ ಕಟಾಯಿಸಲಾಗುವುದು ಎಂದು ಮಾರ್ಪಾಡು ಮಾಡುವುದು.

ಸರ್ಕಾರಿ ನೌಕರನೊಂದಿಗೆ ಸಾಮಾನ್ಯವಾಗಿ ವಾಸವಾಗಿರುವ ಆತನ ತಂದೆ ಅಥವಾ ತಾಯಿ(ಮಲತಾಯಿಯನ್ನೊಳಗೊಂಡಂತೆ) ಅವರು ಇತರೆ ಯಾವುದೇ ಆರೋಗ್ಯ ಸೌಲಭ್ಯಕ್ಕೆ ಒಳಪಟ್ಟಿರಬಾರದು ಹಾಗೂ ಒಬ್ಬರ ಅಥವಾ ಇಬ್ಬರ ಮಾಸಿಕ ಆದಾಯ ರೂ 27,000 ಗಳಿಗೆ ಮೀರಿರಬಾರದು ಎಂದು ಮಾರ್ಪಡಿಸುವುಸು ಎಂದು ತಿಳಿಸಲಾಗಿದೆ.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

5 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

5 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

6 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

6 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

8 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

17 hours ago