ಕಲಬುರಗಿ.22.ಏಪ್ರಿಲ್.25:- ಕಲ್ಯಾಣ ಕರ್ನಾಟಕ ಎಂದರೆ ಹಿಂದುಳಿದ ಹಾಗೂ ಮೂಲ ಸೌಕರ್ಯವಿಲ್ಲದ ಪ್ರದೇಶ ಎಂಬ ಹಣೆಪಟ್ಟಿ ಇತ್ತು. ಆದರೆ ನಮ್ಮ ಕಾಂಗ್ರೆಸ್ ಸರ್ಕಾರದ ಸತತ ಪ್ರಯತ್ನಗಳು ಕಲ್ಯಾಣ ಕರ್ನಾಟಕಕ್ಕೆ ನಿಜವಾದ ಕಲ್ಯಾಣ ರೂಪವನ್ನು ನೀಡುವ ಮೂಲಕ ಈ ನಕಾರಾತ್ಮಕ ಅಭಿಪ್ರಾಯವನ್ನು ಅಳಿಸಿ ಹಾಕಿದೆ. ಗುಣಮಟ್ಟದ ಮೂಲಸೌಕರ್ಯ ಹಾಗೂ ಸೇವೆಗಳನ್ನು ಒದಗಿಸುವುದರಲ್ಲಿ ಕಲ್ಯಾಣ ಕರ್ನಾಟಕ ತ್ವರಿತವಾಗಿ ಬೆಳವಣಿಗೆ ಹೊಂದುತ್ತಿದೆ.
ಕಲ್ಯಾಣ ಕರ್ನಾಟಕದ ಭಾಗದ ಜನರು ಹೆಚ್ಚಿನ ಆರೋಗ್ಯ ಚಿಕಿತ್ಸೆಗಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿದ್ದರು. ಇದು ಅವರಿಗೆ ಆರ್ಥಿಕ ಹೊರೆಯನ್ನು ಹೆಚ್ಚಿಸಿತ್ತು. ಈ ಪರಿಸ್ಥಿತಿಯನ್ನು ನಿವಾರಿಸಿ, ಎಲ್ಲ ಸೌಲಭ್ಯಗಳೂ ಕೂಗಳತೆ ದೂರದಲ್ಲಿ ದೊರಕಿಸಬೇಕು ಎಂಬ ಸದುದ್ದೇಶದಿಂದ ಕಲಬುರಗಿ ಈಗ ಹೆಲ್ತ್ ಹಬ್ ರೂಪ ಪಡೆದುಕೊಳ್ಳುತ್ತಿದೆ.
ಬೆಂಗಳೂರು, ಮಂಗಳೂರು, ಮೈಸೂರಿನಂತಹ ದೊಡ್ಡ ಜಿಲ್ಲೆಗಳಲ್ಲಿ ಸಿಗುವ ಅತ್ಯಾಧುನಿಕ ಹಾಗೂ ವಿವಿಧ ಆರೋಗ್ಯ ಸೌಲಭ್ಯಗಳು ಇದೀಗ ನಮ್ಮ ಕಲಬುರಗಿಯಲ್ಲಿ ಸಿಗುತ್ತಿವೆ ಎನ್ನುವುದು ವಿಶೇಷ.
ಕಲಬುರಗಿ ನಗರದಲ್ಲಿ ಇಎಸ್‌ಐ ಆಸ್ಪತ್ರೆ, ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಕೇರ್ ವಿಭಾಗ, ತಾಯಿ ಮಕ್ಕಳ ಆಸ್ಪತ್ರೆ ಸೇರಿದಂತೆ ಶೀಘ್ರದಲ್ಲಿಯೇ ನಿಮಾನ್ಸ್ ಆಸ್ಪತ್ರೆಯ ಘಟಕದ ನಿರ್ಮಾಣವನ್ನು ಸಹ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಹೊಸ ಘೋಷಣೆಗಳ ಕಾಮಗಾರಿ ಶೀಘ್ರವೇ ಆರಂಭವಾಗಲಿದ್ದು, ಕಡಿಮೆ ವೆಚ್ಚದಲ್ಲಿ ಅತ್ಯುತ್ತಮ ಗುಣಮಟ್ಟದ ಸೇವೆಯನ್ನು ಈ ಭಾಗದ ಜನರಿಗೆ ಒದಗಿಸಲು ಸಿದ್ಧವಾಗಲಿವೆ.
ಕಲಬುರಗಿಗೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡಿದ ಕೊಡುಗೆ ಏನು ಎಂಬ ಪ್ರಶ್ನೆಗೆ ನಗರದಲ್ಲಿ ನಿರ್ಮಾಣ ಆಗಿರುವ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸೇವೆಗಳೇ ಉತ್ತರ. ನಮ್ಮ ಕೆಲಸಗಳು, ಯೋಜನೆಗಳು ನೇರವಾಗಿ ಸಾರ್ವಜನಿಕರ ಮನೆ ಅಂಗಳಕ್ಕೆ ತಲುಪುತ್ತವೆ.
ಇವು ಕೇವಲ ಗುದ್ದಲಿ ಪೂಜೆಗೆ ಸೀಮಿತವಾಗಿರುವುದಿಲ್ಲ. ನಾವು ನುಡಿದಂತೆ ನಡೆಯುತ್ತಿದ್ದೇವೆ ಎನ್ನುವುದಕ್ಕೆ ಸರ್ಕಾರ ಜಾರಿಗೊಳಿಸುತ್ತಿರುವ ಫಲಪ್ರದ ಯೋಜನೆಗಳು ಸಾಮಾನ್ಯ ಜನರ ಜೀವನ ದೆಸೆಯನ್ನು ಬದಲಿಸಿ, ಅವರಲ್ಲಿ ಆರ್ಥಿಕ ಮತ್ತು ಸಾಮಾಜಿಕ ಬಲ ತುಂಬುತ್ತಿರುವುದೇ ಸಾಕ್ಷಿ.
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…