03/08/2025 8:36 AM

Translate Language

Home » ಲೈವ್ ನ್ಯೂಸ್ » ಆರ್‌ಟಿಐ ಮಾಹಿತಿ ಕೊಡದಿದ್ದರೆ ಅಧಿಕಾರಿಗೆ ದಂಡ : ಹರೀಶ್ ಕುಮಾರ್

ಆರ್‌ಟಿಐ ಮಾಹಿತಿ ಕೊಡದಿದ್ದರೆ ಅಧಿಕಾರಿಗೆ ದಂಡ : ಹರೀಶ್ ಕುಮಾರ್

Facebook
X
WhatsApp
Telegram

ಬೆಂಗಳೂರು.03.ಆಗಸ್ಟ್.25:- ಮಾಹಿತಿ ಹಕ್ಕು ಅಧಿನಿಯಮ 2005 ಸಂಬಂಧಿಸಿತ್ ಇಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪೊಲೀಸ್ ಇಲಾಖೆ ವತಿಯಿಂದ ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಅಧಿನಿಯಮ 2005 ರನ್ವಯ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾಹಿತಿ ಹಕ್ಕು ಬಹಳ ಸರಳ ಹಾಗೂ ಗಂಭೀರ ಸ್ವರೂಪ ಹೊಂದಿದ್ದು, ಸರಕಾರವನ್ನು ಬುಡಮೇಲು ಮಾಡುವ ಶಕ್ತಿ ಕೂಡ ಇದೆ. ಹೀಗಾಗಿ, ಜನಪರ ಕಾನೂನು ಜಾರಿಯಾದ ನಂತರ ಅದರ ಬಗ್ಗೆ ಸರಕಾರಿ ಅಧಿಕಾರಿಗಳು ತಿಳಿದಿರಬೇಕು. ಜತೆಗೆ, ಅರ್ಜಿದಾರರು ಕೂಡ ಮಾಹಿತಿ ಹಕ್ಕು ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳದೆ ಸಮಾಜದ ನೈತಿಕತೆ, ಸಾಮಾಜಿಕ ಸ್ವಾತಂತ್ರ್ಯ ಕಾಪಾಡುವ ನಿಟ್ಟಿನಲ್ಲಿ ಮಾಹಿತಿ ಕೇಳಬೇಕು ಎಂದು ಅವರು ತಿಳಿಸಿದರು.

ಪೊಲೀಸ್ ಠಾಣೆಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂಬ ಸುಪ್ರೀಂಕೋರ್ಟ್ ಹೇಳಿಕೆಯನ್ನು ಆಧರಿಸಿ ಕಡ್ಡಾಯವಾಗಿ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಸಿರಬೇಕು. ಹಾಗೆಯೇ ಅವುಗಳನ್ನು ಒಂದು ವರ್ಷಗಳ ಕಾಲ ನಿರ್ವಹಣೆ ಮಾಡಬೇಕಿದೆ. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಇದನ್ನು ಪಾಲಿಸುವುದು ಅವಶ್ಯಕ ಎಂದರು.

ರಾಜ್ಯ ಮಾಹಿತಿ ಆಯೋಗದ ಆಯುಕ್ತೆ ಡಾ.ಬಿ.ಆರ್.ಮಮತಾ ಮಾತನಾಡಿ, ಮಾಹಿತಿ ಹಕ್ಕಿನ ಕಾಯ್ದೆಯ ಬಗ್ಗೆ ಸಾರ್ವಜನಿಕರಲ್ಲಿ ಹಾಗೂ ಅಧಿಕಾರಿಗಳಲ್ಲಿ ಅರಿವಿನ ಕೊರತೆ ಇದೆ. ಈ ಕಾಯ್ದೆಯು ಸಾರ್ವಜನಿಕ ಜನ ಸ್ನೇಹಿ ಕಾಯ್ದೆಯಾಗಿದೆ. ಇದನ್ನು ಪೋಷಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. 6(1) ಅಧಿನಿಯಮದ ಪ್ರಕಾರ ಮಾಹಿತಿ ಕೋರಿ ಅರ್ಜಿ ಬಂದರೆ ಅಂತಹ ಅರ್ಜಿಗೆ 30 ದಿನಗಳ ಒಳಗಾಗಿ ಪ್ರತಿ ಪುಟಕ್ಕೆ ಎರಡು ರೂ.,ಗಳಂತೆ ಹಣ ಪಾವತಿಸಿಕೊಂಡು ಮಾಹಿತಿ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಎಎಸ್ಪಿ ನಾಗರಾಜ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ಪ್ರಮುಖರಿದ್ದರು.

ರಾಜ್ಯದಲ್ಲಿ 45000 ದ್ವಿತೀಯ ಹಂತದ ಮೇಲ್ಮನವಿ ಪ್ರಕರಣಗಳು ಬಾಕಿ ಇದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು 9ನೇ ಸ್ಥಾನದೊಂದಿಗೆ 1,440 ದ್ವಿತೀಯ ಮೇಲ್ಮನವಿ ಪ್ರಕರಣಗಳು ಬಾಕಿ ಉಳಿದಿವೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಕೆ.ಬದ್ರುದ್ದೀನ್ ಮಹಿತಿ ನೀಡಿದರು.

ಕಂದಾಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಈಗ ಎಲ್ಲವೂ ಆನ್‌ಲೈನ್‌ನಲ್ಲಿ ಮಾಹಿತಿ ಸಿಗುವಂತೆ ಮಾಡಲಾಗಿದೆ. ಜತೆಗೆ, ಸಾರ್ವಜನಿಕ ಹಿತಾಸಕ್ತಿ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಮಾಹಿತಿ ಹಕ್ಕು ಮುಖ್ಯ. ಅಧಿಕಾರಿಗಳು ಯಾವುದೇ ಭಯ ಪಡದೇ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ವಿಲೇವಾರಿ ಮಾಡಬೇಕು.

-ಎ.ಬಿ.ಬಸವರಾಜು,ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!