ಆರ್ಥಿಕ ಬೆಳವಣಿಗೆಗೆ ಕೃಷಿಯ ಜೊತೆ ಹೈನುಗಾರಿಕೆ ಕೋಳಿ, ಮೀನು ಸಾಕಾಣಿಕೆಗೂ ಆದ್ಯತೆ ನೀಡಿ-ಸಚಿವ ಈಶ್ವರ ಬಿ.ಖಂಡ್ರೆ


ಬೀದರ 17. ಜನವರಿ.25:- ಪ್ರಕೃತಿ ವಿಕೋಪ ಬದಲಾಗುತ್ತಿರುವ ಹವಾಮಾನ ವೈಪರಿತ್ಯ ಎದುರಿಸುವ ನಿಟ್ಟಿನಲ್ಲಿ ರೈತರು ಆರ್ಥಿಕವಾಗಿ ಸಬಲರಾಗಲು ಕೃಷಿಯ ಜೊತೆಯಲ್ಲಿ ಹೈನುಗಾರಿಕೆ, ಕೋಳಿ ಹಾಗೂ ಮೀನು ಸಾಕಾಣಿಕೆಗೂ ಕೂಡ ಮಹತ್ವ ನೀಡುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ತಿಳಿಸಿದರು.


ಅವರು ಇಂದು ಬೀದರನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 20ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಜಾನುವಾರು ಕುಕ್ಕುಟ ಹಾಗೂ ಮತ್ಸö್ಯಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಬೀದರ ಜಿಲ್ಲೆಯಲ್ಲಿ ಶೇ.70 ರಷ್ಟು ಜನ ಕೃಷಿ ಮೇಲೆ ಅವಲಂಬಿತರಾಗಿದ್ದಾರೆ. ರೈತರ ಬೆಳೆಗಳಿಗೆ ವೈಜ್ಞಾನಿಕೆ ಬೆಲೆ ಬರಬೇಕು. ಪ್ರಕೃತಿ ವಿಕೋಪದಂತಹ ಪರಿಸ್ಥಿತಿಯಲ್ಲಿ ರೈತರಿಗೆ ಸಾಕಷ್ಟು ನಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ರೈತರು ಕೃಷಿ ಜೊತೆ ಸಹ ಉತ್ಪಾದನೆಗಳಾದ ಪಶು ಸಂಗೋಪನೆಗೆ ಆದ್ಯತೆ ನೀಡಬೇಕೆಂದರು.


ಜಿಲ್ಲೆಯಲ್ಲಿ ಕೃಷಿ ಪೂರಕ ಸಾಕಷ್ಟು ಉತ್ತಮ ವಾತಾವರಣವಿದ್ದು ನೈಸರ್ಗಿಕ ಸಂಪತ್ತಭರಿತವಾಗಿದೆ. ಈ ಭಾಗದಲ್ಲಿ ಹೈನುಗಾರಿಕೆ, ಕೋಳಿ, ಕುರಿ ಮತ್ತು ಮೀನು ಸಾಕಾಣಿಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ 20 ವರ್ಷಗಳ ಹಿಂದೆ ಬೀದರ ಜಿಲ್ಲೆಯಲ್ಲಿ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆರಂಭಿಸಲಾಗಿದೆ.

ಈಗಿನ ಯುವಕರಿಗೆ ಹಾಗೂ ಯುವಜನಾಂಗಕ್ಕೆ ಈ ತರಬೇತಿಗಳನ್ನು ಆರ್ಥಿಕ ಸಬಲೀಕರಣವಾಗುವ ಯೋಜನೆಗಳ ಕುರಿತು ಅಗತ್ಯ ಮಾಹಿತಿ ಹಾಗೂ ತರಬೇತಿಯನ್ನು ನೀಡಬೇಕಿದೆ.

ವಿಜ್ಞಾನ ತಂತ್ರಜ್ಞಾನ ಬದಲಾದಂತೆ ವಿಜ್ಞಾನಿಗಳು ಹೊಸ-ಹೊಸ ತಳಿಗಳನ್ನು ಬೆಳಕಿಗೆ ತರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರು ಯಾವ ತಳಿ ಬೆಳೆದರೆ ಹೆಚ್ಚಿನ ಲಾಭವಾಗುತ್ತದೆ ಎಂಬ ಬಗ್ಗೆ ಅಗತ್ಯ ತರಬೇತಿ ಅಗತ್ಯವಿರುತ್ತದೆ. ಜಿಲ್ಲೆಯಲ್ಲಿ ಈಗಾಗಲೇ ಒಂದೂವರೆ ಲಕ್ಷ ಹಾಲು ಉತ್ಪಾದಿಸಲಾಗುತ್ತದೆ. ಇನ್ನು ಹೆಚ್ಚಿನ ಹಾಲು ಉತ್ಪಾದನೆಗೆ ಮಹಿಳೆಯರು ಒತ್ತು ನೀಡಬೇಕಿದೆ.

ಹಾಲಿನ ಉಪ ಉತ್ಪಾದನಗಳಿಗೂ ಸಹ ಮಾರುಕಟ್ಟೆ ಲಭ್ಯವಾಗಬೇಕಾಗಿದೆ. ಸರ್ಕಾರವು ಹೈನುಗಾರಿಕೆ ಸೇರಿದಂತೆ ಕೃಷಿ ಪೂರಕವಾದಂತಹ ಚಟುವಟಿಕೆಗಳಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುತ್ತದೆ.

ಬಡ್ಡಿ ರಹಿತ ಸಾಲ, ರೋಗಗಳನ್ನು ತಡೆಗಟಲು ಜಾನುವಾರುಗಳಿಗೆ ಲಸಿಕೆ ನೀಡಲಾಗುತ್ತಿದೆ. ಉತ್ತಮ ಮೇವಿನ ಕಿಟ್ಟುಗಳನ್ನು ನೀಡಲಾಗುತ್ತಿದೆ. ರೈತರು ಹಾಗೂ ವಿಜ್ಞಾನಿಗಳ ಜೊತೆ ಸಂವಾದ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.


ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಅಗತ್ಯವಾದಂತಹ ಆಡಳಿತ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ಮಂಜೂರಾತಿಗಾಗಿ ಮುಖ್ಯಮಂತ್ರಿ ಜೊತೆ ಚರ್ಚಿಸುವುದಾಗಿ ತಿಳಿಸಿದರು. ತಾತ್ಕಾಲಿಕ ಬೋಧಕ-ಬೋಧಕೇತರ ಹುದ್ದೆಗಳ ಭರ್ತಿಗೂ ಸಹ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಕೆಕೆಆರ್‌ಡಿಬಿ ಅಡಿಯಲ್ಲಿ ಹೆಚ್ಚಿನ ಅನುದಾನ ನೀಡಲು ಸಹ ಯೋಜಿಸಲಾಗುವುದೆಂದು ತಿಳಿಸಿದರು.


ಇದೇ ಸಂದರ್ಭದಲ್ಲಿ ಸ್ವರ್ಣ ಸಂಚಿಕೆ ಮತ್ತು ಇತರೆ ಪ್ರಕಟಣೆಗಳ ಬಿಡುಗಡೆ ಹಾಗೂ ತಂತ್ರಜ್ಞಾನ ಆಧಾರಿತ ತಳಿ ಗುರುತಿಸುವ ಮೊಬೈಲ್ ಆ್ಯಪ್ ಲೋಕಾರ್ಪಣೆಗೊಳಿಸಿ ಹಾಗೂ ರಾಜ್ಯದ 31 ಜಿಲ್ಲೆಗಳ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ರೈತರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.


ಈ ಸಂದರ್ಭದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹಾರಕೂಡ ಮಠದ ಡಾ.ಚನ್ನವೀರ ಶಿವಾಚಾರ್ಯರರು, ಭಾಲ್ಕಿ ಮಠದ ಗುರುಬಸವ ಪಟ್ಟದ್ದೇವರು, ಪಶು ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಆಯುಕ್ತರಾದ ರೂಪಾ, ಬೀದರನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಕೆ.ಸಿ.ವೀರಣ್ಣ, ವ್ಯವಸ್ಥಾಪಕ ಮಂಡಳಿ ಸದಸ್ಯರುಗಳಾದ ಲತಾ ಡಿ.ಎಚ್. ಡಾ.ವೆಂಕಟಾಚಲ ವಿ.ಎಚ್., ಡಾ.ಎಚ್.ಎಂ.ಜಯಪ್ರಕಾಶ, ಸಂಗಪ್ಪ ದೊಡ್ಡಬಸಪ್ಪಾ ವಾಲೀಕರ, ಬಸವರಾಜ ಪಿ.ಭತಮುರ್ಗೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ನಿರ್ದೇಶಕರಾದ ಡಾ.ಮಂಜುನಾಥ ಪಾಳೇಗಾರ, ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ದಿನೇಶ ಕುಮಾರ ಕಲ್ಲೇರ, ಬೀದರ ಕಪಪಮೀವಿವಿ ಕುಲಸಚಿವರಾದ ಡಾ.ಪಿ.ಟಿ.ರಮೇಶ, ಯಾದಲಾಪೂರ ಗ್ರಾಮ ಪಂಚಾಯತ ಅಧ್ಯಕ್ಷರಾದ ಸಪ್ನಾ ಸಜೀವಕುಮಾರ, ಬೀದರ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಡೀನ್ ಡಾ.ಎಂ.ಕೆ.ತಾAದಳೆ, ವಿಸ್ತರಣಾ ಅಧಿಕಾರಿಗಳಾದ ಬಸವರಾಜ ಅವಟಿ, ವಿವಿಧ ಇಲಾಖೆಗಳ ಉಪನಿರ್ದೇಶಕರುಗಳು ಸೇರಿದಂತೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

prajaprabhat

Recent Posts

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

16 minutes ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

25 minutes ago

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

6 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

6 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

7 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

7 hours ago