ಕೊಪ್ಪಳ.13.ಆಗಸ್ಟ್.25 ಕರ್ನಾಟಕ ಆರ್ಯ ವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ‘ಅರಿವು’ ಶೈಕ್ಷಣಿಕ ಸಾಲ ಯೋಜನೆಯಡಿ ಆರ್ಯ ವೈಶ್ಯ ಸಮುದಾಯದ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ., ಎನ್.ಇ.ಇ.ಟಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಎಮ್.ಬಿ.ಬಿ.ಎಸ್., ಬಿ.ಇ., ಬಿ.ಟೆಕ್., ಇತ್ಯಾದಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ವರ್ಷಕ್ಕೆ ರೂ. 1 ಲಕ್ಷಗಳ ಶೈಕ್ಷಣಿಕ ಸಾಲವನ್ನು ಶೇಕಡಾ 2ರ ಬಡ್ಡಿದರದಲ್ಲಿ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ನೀಡಿ, ನಂತರ 36 ತಿಂಗಳ ಮಾಸಿಕ ಕಂತುಗಳಲ್ಲಿ ಈ ಸಾಲವನ್ನು ಮರುಪಾವತಿ ಮಾಡಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆರ್ಯವೈಶ್ಯ ಸಮುದಾಯದವರಾಗಿರಬೇಕು. ವಯಸ್ಸು 18 ರಿಂದ 35 ವರ್ಷಗಳೊಳಗಿರಬೇಕು. ಗ್ರಾಮ ಹಾಗೂ ನಗರ ಪ್ರದೇಶ ಸೇರಿದಂತೆ ಕುಟುಂಬದ ವಾರ್ಷಿಕ ಆದಾಯವು ರೂ. 6 ಲಕ್ಷದ ಮಿತಿಯೊಳಗಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ಜಾತಿ ಹಾಗೂ ಆದಾಯ ಪ್ರಮಾಣಪತ್ರ (ನಮೂನೆ-ಜೆ) ಮಾನ್ಯವಾಗಿರಬೇಕು. ಆಧಾರ್ ಸಂಖ್ಯೆ ಮೊಬೈಲ್ ಹಾಗೂ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು. ಮಹಿಳೆಯರಿಗೆ ಶೇ.33ರಷ್ಟು ಹಾಗೂ ವಿಕಲಚೇತನರಿಗೆ ಶೇ.5ರಷ್ಟು ಮೀಸಲಾತಿ ಇರಿಸಲಾಗಿದೆ. ಈ ಯೋಜನೆಯಡಿ ಒಂದು ಕುಟುಂಬದಿಂದ ಗರಿಷ್ಠ ಇಬ್ಬರಿಗೆ ಮಾತ್ರ ಸೌಲಭ್ಯ ನೀಡಲಾಗುವುದು.
ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು,
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದ ಸಹಾಯವಾಣಿ 9448451111 ಗೆ ಬೆಳಿಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸುವ ಕುರಿತಂತೆ ಮಾರ್ಗಸೂಚಿ ಹಾಗೂ ವಿವರಗಳನ್ನು ನಿಗಮದ ವೆಬ್‌ಸೈಟ್ https://kacdc.karnataka.gov.in/ ಮೂಲಕ ಪಡೆಯಬಹುದಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…