ಆಶಾ ಮಾರ್ಗದರ್ಶಕರ (ASHA Mentors) ಹುದ್ದೆಗಳು ಅಗತ್ಯವಿಲ್ಲವೆಂದು ‘ಕರ್ತವ್ಯದಿಂದ ಮುಕ್ತ’ಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.13.ಜೂನ್.25:- ರಾಜ್ಯದ ಆರೋಗ್ಯ ಇಲಾಖೆಯಲ್ಲಿ NHM ಅಡಿಯಲ್ಲಿ ನೇಮಕಗೊಂಡ ಆಶಾ ಮೆಂಟರ್ಸ್ ಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2007-08ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ತರಬೇತಿಗಾಗಿ ನೇಮಕಗೊಂಡಂತ ಆಶಾ ಮೆಂಟರ್ಸ್ ಗಳನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಆದೇಶಿಸಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನರವರ ಕಡತದಲ್ಲಿ 2007-08ನೇ ಸಾಲಿನಲ್ಲಿ NHM ಅಡಿಯಲ್ಲಿ ನೇಮಕಗೊಂಡ ಗುತ್ತಿಗೆ ನರ್ಸಿಂಗ್ ಸಿಬ್ಬಂದಿಯನ್ನು ಹೊಸದಾಗಿ ಸೇರ್ಪಡೆಗೊಂಡ ಆಶಾಕಾರ್ಯಕರ್ತೆಯರಿಗೆ ತರಬೇತಿ ನೀಡಲು TOT ಆಗಿ ನಿಯೋಜನೆ ಮಾಡಲಾಗಿದ್ದು, ಅನಂತರದಲ್ಲಿ ಅವರುಗಳನ್ನು District Community Mobilizer / Block Community Mobilizer (ASHA Mentor) ಎಂದು ಮರುನಾಮಕರಣ ಮಾಡಲಾಗಿರುತ್ತದೆ. ಸದರಿಯವರು ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡುವುದು, ಅವರುಗಳ ಮೇಲ್ವಿಚಾರಣೆ ಮಾಡುವುದು, ಆಶಾ ನಿಧಿ ಪೋರ್ಟಲ್ ಅನ್ನು ನಿರ್ವಹಿಸುವುದು ಹಾಗೂ ಪ್ರೋತ್ಸಾಹಧನದ ಪಾವತಿ ಪ್ರಕ್ರಿಯೆಯಂತಹ ಸಕಾಲಿಕ ನಿರ್ವಹಣೆ ಕಾರ್ಯಗಳನ್ನು ನಿರ್ವಹಿಸುತ್ತಿರುತ್ತಾರೆ ಎಂದಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ 195 ಆಶಾ ಮೆಂಟರ್ಸ್ (District Community Mobilizer / BlockCommunity Mobilizer) ಕಾರ್ಯನಿರ್ವಹಿಸುತ್ತಿದ್ದು, ಇವರುಗಳು ನಿರ್ವಹಿಸುತ್ತಿರುವ ಕಾರ್ಯಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟದಲ್ಲಿ LHV/Sr HIO, ತಾಲ್ಲೂಕು ಮಟ್ಟದಲ್ಲಿ LHV/Sr HIO ಮತ್ತು ಜಿಲ್ಲಾಮಟ್ಟದಲ್ಲಿ DNO ಗಳು ನಿರ್ವಹಿಸಬಹುದೆಂದು, ಈ ಕಾರ್ಯಗಳ ನಿರ್ವಹಣೆಗೆ LHV/Sr HIO ಮತ್ತು DNO ಗಳಿಗೆ ತರಬೇತಿ ನೀಡಬಹುದೆಂದು ಈ ಹಿನ್ನೆಲೆಯಲ್ಲಿ ಪ್ರಸ್ತುತ ರಾಜ್ಯದಲ್ಲಿ ಆಶಾ ಮಾರ್ಗದರ್ಶಕರ (ASHA Mentors) ಹುದ್ದೆಗಳು ಅಗತ್ಯವಿಲ್ಲವೆಂದು ಸದರಿ ಹುದ್ದೆಗಳನ್ನು ಮುಕ್ತಗೊಳಿಸುವಂತೆ ಪುಸ್ತಾಪಿಸಿರುತ್ತಾರೆ ಎಂದು ಹೇಳಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಈ ಕೆಳಕಂಡಂತೆ ಆದೇಶಿಸಿದೆ. ರಾಜ್ಯದಲ್ಲಿನ 195 ಆಶಾ ಮೆಂಟರ್ಸ್ ಆಗಿ NHM ಅಡಿಯಲ್ಲಿ ಶುಶೂಷಕರ ಅರ್ಹತೆಯಿರುವ ಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಕರ್ತವ್ಯದಿಂದ ಮುಕ್ತಗೊಳಿಸಿದೆ. ಇವರುಗಳನ್ನು ಅರ್ಹರಿದ್ದಲ್ಲಿ ಆಯಾ ಜಿಲ್ಲೆಗಳಲ್ಲಿ NHM ಅಡಿ ಖಾಲಿ ಇರುವ ಶುಶೂಷಕರ ಹುದ್ದೆಗಳಿಗೆ ಗುತ್ತಿಗೆ ನೌಕರರಾಗಿ ಆದ್ಯತೆ ಮೇಲೆ ನೇಮಿಸಲು ಪರಿಗಣಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಆಶಾ ಮೆಂಟರ್ಸ್‌ಗಳು ನಿರ್ವಹಿಸುತ್ತಿದ್ದ ಜವಾಬ್ದಾರಿಗಳನ್ನು ಇನ್ನು ಮುಂದೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟದಲ್ಲಿ ಮಹಿಳಾ ಆರೋಗ್ಯ ಸಂದರ್ಶಕರು/ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು ಹಾಗೂ ಉಪಕೇಂದ್ರಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು/ ಸಮುದಾಯ ಆರೋಗ್ಯ ಅಧಿಕಾರಿಗಳು ನಿರ್ವಹಿಸುವಂತೆ ಆದೇಶಿಸಿದ್ದಾರೆ.

prajaprabhat

Recent Posts

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

15 minutes ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

9 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

12 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

12 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

13 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

13 hours ago