ಕೊಪ್ಪಳ.13.ಆಗಸ್ಟ್.25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಖಾಸಗಿ ಸಂಸ್ಥೆಗಳು ಆಗಮಿಸಿ, ತಮ್ಮಲಿರುವ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಪಿ.ಯು.ಸಿ ಅಥವಾ ಪದವಿ ಅಥವಾ ಸ್ನಾತಕೋತ್ತರ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಲಿಚ್ಛೀಸುವ 18 ರಿಂದ 30 ವರ್ಷ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…