ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10 ಗಂಟೆಗೆ ಗುರುನಾನಕ್ ಎಂಜಿನಿಯರಿoಗ್ ಕಾಲೇಜು ಸಭಾಂಗಣ ಬೀದರದಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಜೇವರ್ಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಅಜಯ್ ಧರಮ್ ಸಿಂಗ್ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಆಯೇಶಾ ಖಾನಂ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ್ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ ಹಾಗೂ ವಿಧಾನ ಪರಿಷತ್ತ್ ಶಾಸಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಎಂ.ಜಿ.ಮೂಳೆ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಬೀದರ ಗುರುನಾನಕ್ ಎಂಜಿನಿಯರಿoಗ್ ಕಾಲೇಜಿನ್ ಅಧ್ಯಕ್ಷ ಡಾ.ಎಸ್.ಬಲ್ಬೀರ್ ಸಿಂಗ್, ಬೀದರ ಶ್ರೀ ನಾನಕ್ ಝೀರಾ ಸಾಹಿಬ್ ಪ್ರತಿಷ್ಠಾನದ ಅಧ್ಯಕ್ಷ ನಾನಕ್ ಝೀರಾ ಸಾಹಿಬ್, ಬೀದರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ದಿಲಿಫ್ ಬದೋಲೆ, ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರುಗಳು ಭಾಗವಹಿಸಲಿದ್ದಾರೆ.
ಗೋಷ್ಠಿ-1 “ನ್ಯೂಸ್ ರೂಂ ನಲ್ಲಿ ಎ1 ಮತ್ತು ನಾನು” ಸಂಪನ್ಮೂಲ ವ್ಯಕ್ತಿಗಳು: ಹಿರಿಯ ಪತ್ರಕರ್ತರು ಹಾಗೂ ಮಾಧ್ಯಮ ಸಮಾಲೋಚಕ ಎಸ್.ಕುಮಾರ್ ನಡೆಸಿಕೊಡಲಿದ್ದಾರೆ.
ಗೋಷ್ಠಿ-2 “ಸುದ್ಧಿಯಲ್ಲಿ ನಿಖರತೆ ಮತ್ತು ಪರಿಣಾಮಕಾರಿ ಸಂವಹನ” ಸಂಪನ್ಮೂಲ ವ್ಯಕ್ತಿಗಳು: ಪ್ರೋ.ಸಪ್ನಾ ಎಂ.ಎಸ್., ನಿರ್ದೇಶಕರು, ಇಎಂಆರ್‌ಸಿ ಹಾಗೂ ಪ್ರೊಫೆಸರ್, ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗ, ಮೈಸೂರು ವಿಶ್ವವಿದ್ಯಾಲಯ ಇವರು ನಡೆಸಿಕೊಡಲಿದ್ದಾರೆ.
ಕಾರ್ಯಕ್ರಮದ ನಿರೂಪಣೆಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾದ ಶ್ರೀಮತಿ ಎಸ್.ರಶ್ಮಿ ಮಾಡಲಿದ್ದಾರೆ.