ಇಂಡಿಯನ್ ಏರ್ ಫೋರ್ಸ್ ನೇಮಕಾತಿ 2025 – IAF Agniveer-Vayu Musician Recruitment 2025

IAF Agniveervayu Musician Recruitment 2025 : ಇಂಡಿಯನ್ ಏರ್ ಫೋರ್ಸ್ ನಿಂದ ಅಗ್ನಿವೀರವಾಯು (ಮ್ಯೂಸಿಷಿಯನ್) ಹುದ್ದೆಗಳ ನೇಮಕಕ್ಕೆ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ.

IAF Agniveervayu Musician Recruitment 2025 : Details of Vacancies
ಹುದ್ದೆ : ಅಗ್ನಿವೀರವಾಯು (ಮ್ಯೂಸಿಷಿಯನ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಟೆಂಪೊ, ಪಿಚ್‌ನಲ್ಲಿ ನಿಖರತೆಯೊಂದಿಗೆ ಸಂಗೀತದಲ್ಲಿ ಪ್ರಾವೀಣ್ಯತೆಯನ್ನು ಹೊಂದಿರಬೇಕು ಮತ್ತು ಒಂದು ಸಂಪೂರ್ಣ ಹಾಡನ್ನು ಹಾಡಬೇಕು

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2005 ಜನವರಿ 1 ಮತ್ತು 2008 ಜುಲೈ 1ರ ನಡುವೆ ಜನಿಸಿರಬೇಕು.

ವೇತನ :
• ಮೊದಲನೇ ವರ್ಷ (ಮಾಸಿಕ) – ರೂ. 30,000
• ಎರಡನೇ ವರ್ಷ (ಮಾಸಿಕ) – ರೂ. 33,000
• ಮೂರನೇ ವರ್ಷ (ಮಾಸಿಕ) – ರೂ. 36,500
• ನಾಲ್ಕನೇ ವರ್ಷ (ಮಾಸಿಕ) – ರೂ. 40,000

ಆಯ್ಕೆ ವಿಧಾನ : ಸಂಗೀತ ವಾದ್ಯಗಳನ್ನು ನುಡಿಸುವಲ್ಲಿ ಪ್ರಾವೀಣ್ಯತೆಯ ಪರೀಕ್ಷೆ, ಇಂಗ್ಲೀಷ್ ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಕನಿಷ್ಠ ಎತ್ತರ :
• ಪುರುಷ – 162 ಸೆಂ. ಮೀ.
• ಮಹಿಳೆ – 152 ಸೆಂ. ಮೀ.

ಉದ್ಯೋಗ ಮಾಹಿತಿ : HAL ನೇಮಕಾತಿ 2025

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.


ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.


ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.


ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.


ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).


ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :


ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 21, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 11, 2025

ಈ ಕೆಳಕೋತಿರುವ ಲಿಂಕ್ ಗೆ ಕ್ಲಿಕ್ ಮಾಡಿ

https://agnipathvayu.cdac.in

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

33 minutes ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

35 minutes ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

39 minutes ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

42 minutes ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

44 minutes ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

1 hour ago