Home » ಲೈವ್ ನ್ಯೂಸ್ » ಇಂಡಿಯಾ ಒಕ್ಕೂಟದ ವತಿಯಿಂದ ಅ 12. ರಿಂದ ಅರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆ!

ಇಂಡಿಯಾ ಒಕ್ಕೂಟದ ವತಿಯಿಂದ ಅ 12. ರಿಂದ ಅರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆ!

ದಾವಣಗೆರೆ.11.ಅ: ಇಂಡಿಯಾ ಒಕ್ಕೂಟದ ವತಿಯಿಂದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 12 ರಂದು ದೆಹಲಿಯಲ್ಲಿ  ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಇಸಿ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಈಗಾಗಲೇ ‘ಇಂಡಿಯಾ’ ಒಕ್ಕೂಟದ 300ಕ್ಕೂ ಹೆಚ್ಚು ಸಂಸದರು ಪ್ರತಿಭಟನೆ ನಡೆಸಿದ್ದೇವೆ ಮತ್ತು ಮುಖ್ಯಸ್ಥರು ಹುದ್ದೆಯಿಂದ ಕೆಳಗಿಳಿಯುವವರೆಗೆ ನಮ್ಮ ಈ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.

ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ಮೂರು ಹಂತದ ಬ್ಯಾರಿಕೇಡ್‌ಗಳನ್ನು ಹಾಕಿತ್ತು ಹಾಗೂ ಸಂಸದರ ಸಂಖ್ಯೆಯನ್ನು ನಿಯಂತ್ರಿಸಲು ನಮ್ಮನ್ನು ಬಂಧಿಸಲು ಮುಂದಾಗಿದ್ದರು. ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕೂಡ ಅವಕಾಶ ನೀಡಲಿಲ್ಲ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಪ್ರತಿಭಟನೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರನ್ನು ಬಂಧಿಸಲಾಯಿತು ಮತ್ತು ಪ್ರಿಯಾಂಕಾ ಗಾಂಧಿ ಅವರು ರಸ್ತೆಯ ಮೇಲೆಯೇ ಕುಳಿತು ಪ್ರತಿಭಟನೆಯನ್ನು ಮುಂದುವರೆಸಿದರು ಎಂದು ತಿಳಿಸಿದರು.

ಇಂಡಿಯಾ’ ಒಕ್ಕೂಟದ ಸಭೆಯಲ್ಲಿಯೂ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಯ ಬಗ್ಗೆ ಗಂಭೀರವಾಗಿ ಚರ್ಚಿಸಲಾಗಿದೆ. ಎಸ್‌ಐಆರ್ (SIR) ವಿಚಾರದಲ್ಲಿ ಅವರು ಕಡ್ಡಾಯವಾಗಿ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯ ವೇಳೆ ದೆಹಲಿಯಲ್ಲಿ ಬಿಗಿ ಭದ್ರತೆ ಹಾಗೂ ಸಂಚಾರ ನಿರ್ಬಂಧ ಹೇರಿರುವುದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಇವೆಲ್ಲದರ ಮೂಲಕ ಪ್ರಜಾಪ್ರಭುತ್ವದ ತಳಹದಿಯನ್ನೇ ನಾಶ ಮಾಡುವ ಕೆಲಸ ನಡೆಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಚುನಾವಣೆಗೆ ಕೆಲವೇ ತಿಂಗಳುಗಳ ಮುಂಚಿತವಾಗಿ ಬಿಹಾರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಹಲವೆಡೆ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗಿದೆ. ಈವರೆಗೆ ದೇಶದಲ್ಲಿ 13 ಕೋಟಿ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಮುಖ್ಯಸ್ಥರು ಏಕಪಕ್ಷೀಯವಾಗಿ ತೆಗೆದುಕೊಂಡಿರುವ ಈ ನಿರ್ಧಾರದ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ಆಕ್ಷೇಪ ವ್ಯಕ್ತಪಡಿಸಿದೆ ಎಂದು ತಿಳಿಸಿದರು.

ಇಂತಹ ಪ್ರಮುಖ ತಿದ್ದುಪಡಿಗಳನ್ನು ಮಾಡುವ ಮುನ್ನ ಸಂಸತ್ತಿನಲ್ಲಿ ಚರ್ಚೆಯಾಗಬೇಕು, ಆದರೆ ಯಾವುದೇ ಚರ್ಚೆ ನಡೆಸದೆ ಚುನಾವಣಾ ಆಯೋಗವು ಮನಬಂದಂತೆ ತೀರ್ಮಾನ ಕೈಗೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ಚುನಾವಣಾ ಪ್ರಕ್ರಿಯೆಗಳಲ್ಲಿ ಕೂಡ ಬದಲಾವಣೆ ಆಗಬೇಕು ಎಂದು ತಿಳಿಸಿದರು.

Author

ಪ್ರಮುಖ ಸುದ್ದಿ

Stock market

Astrology