ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಎಚ್ಚರಿಕೆ ನೀಡಿದ್ದಾರೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಸೇರಿದಂತೆ ಬೆಂಗಳೂರು, ಮೈಸೂರು ಭಾಗಗಳಿಗೂ ಮಳೆಯ ಅಲರ್ಟ್ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಗದಗ, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಹಾವೇರಿ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಿದೆ.
ಕರಾವಳಿಯಲ್ಲಿ ಗಂಟೆಗೆ 40 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರ ಪ್ರದೇಶಕ್ಕೆ ತೆರಳದಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಮತ್ತು ಭಾರಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30 ರಿಂದ 40 ಕೀ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಹೇಳಿದೆ.
ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 11 ಸೆಂಟಿ ಮೀಟರ್, ಮಂಗಳೂರು ವಿಮಾನ ನಿಲ್ದಾಣದಲ್ಲಿ 9, ಉಡುಪಿ 8, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ, ಭಟ್ಕಳ, ಶಕ್ತಿನಗರ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ವಿಜಯಪುರದ ಬಿ.ಬಾಗೇವಾಡಿಯಲ್ಲಿ ತಲಾ 7 ಸೆಂ. ಮೀ ಮಳೆ ದಾಖಲಾಗಿದೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…