ಬೀದರ.13.ಜುಲೈ.25:- ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಅವರು ಜುಲೈ.12 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಅಂದು ಬೆಳಿಗ್ಗೆ 10.30 ಗಂಟೆಗೆ ಔರಾದ ತಾಲ್ಲೂಕಿನ ನಾಗಮಾರಪಳ್ಳಿ ಗ್ರಾಮದಲ್ಲಿ ಕರ್ನಾಟಕ ಗಡಿ ಪ್ರದೆಶ ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ಸರ್ಕಾರಿ ಪ್ರೌಢಶಾಲೆಯಲ್ಲಿ ಅಳವಡಿಸಲಾದ ಸ್ಮಾರ್ಟ್ ಬೋರ್ಡ ಹಾಗೂ ಬೀದರ ಜಿಲ್ಲೆಯ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ನೀಡಲಾದ ಅನುದಾನಕ್ಕೆ ಸಂಬoಧಿಸಿದoತೆ ಕಾಮಗಾರಿಗಳ ಪರಿಶೀಲನೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 1.30ಕ್ಕೆ ಭಾಲ್ಕಿ ತಾಲ್ಲೂಕಿನ ಮದಕಟ್ಟಿ (ಬಾಜೋಳಗಾ ಕ್ರಾಸ್) ಗ್ರಾಮದ ಬುದ್ಧಪ್ರಿಯಾ ಪ್ರೌಢ ಶಾಲಾ ಆವರಣದಲ್ಲಿ ಗಡಿ ಪ್ರಾಧಿಕಾರದ ಅನುದಾನದಲ್ಲಿ ನಿರ್ಮಾಣವಾಗಿರುವ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.