ಬೀದರ.06.ಫೆಬ್ರುವರಿ.25:-ಜಿಲ್ಲಾ ವಕೀಲರ ಸಂಘ, ಬೀದರ ಮತ್ತು ಕಾರ್ಮಿಕ ಇಲಾಖೆ, ಬೀದರ ಇವರುಗಳ ಸಂಯುಕ್ತಾಶ್ರಯದಲ್ಲಿ ಫೆಬ್ರುವರಿ.7 ರಂದು ಬೆಳಿಗ್ಗೆ 10.30 ಗಂಟೆಗೆ ಬೀದರನ ಅಂಬೇಡ್ಕರ ವೃತ್ತದ ಹತ್ತಿರದ ಸವಿತಾ ಭವನದಲ್ಲಿ ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನ ಹಾಗೂ ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ ಕುರಿತು ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೀದರ ಕಾರ್ಮಿಕ ಇಲಾಖೆಯ ಜಿಲ್ಲಾ ಕಾರ್ಮಿಕಾಧಿಕಾರಿಗಳಾದ ಮಹೇಶ ಲಕ್ಷö್ಮಣ ಕುಳಲಿ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಬೀದರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಶಿವಶರಣಪ್ಪ ಪಾಟೀಲ್, ಕಾರ್ಯದರ್ಶಿಗಳಾದ ನಾಗೇಂದ್ರ ಬಿರಾದರ, ಬೀದರ ಕಾರ್ಮಿಕ ಇಲಾಖೆ ಕಾರ್ಮಿಕ ನಿರೀಕ್ಷಕರಾದ ಕೆ.ಸುವರ್ಣ ಹಾಗೂ ಉಪನ್ಯಾಸಕರಾಗಿ ರೇಣುಕಾ ಜೋಪಾಟಿ, ಬೀದರ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ಅರ್ಜುನ ಸಿತಾಳಗೇರಾ ಅವರು ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…