Categories: ಬೀದರ

ಇಂದು ಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ

16 ಡಿಸೆಂಬರ್24 ಬೀದರ್:- ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೀದರ ಹಾಗೂ ಬಿ.ವ್ಹಿ. ಭೂಮರೆಡ್ಡಿ ಮಹಾವಿದ್ಯಾಲಯ ಬೀದರ, ಜಿಲ್ಲಾ ವಿಜ್ಞಾನ ಸಮಿತಿ ಬೀದರ ಇವರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 17 ರಂದು ಬೆಳಿಗ್ಗೆ 11 ಗಂಟೆಗೆ ಬಿ.ವ್ಹಿ.ಭೂಮರೆಡ್ಡಿ ಮಹಾವಿದ್ಯಾಲಯ ಸಭಾಂಗಣ ಬೀದರದಲ್ಲಿ ಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಆಯೋಜಿಸಲಾಗಿದೆ.
ಬೀದರ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು (ಡ್ಯಾಪ್ಕೊ) ಹಾಗೂ ಬೀದರ ಬ್ರೀಮ್ಸ್ ಕ್ಷಯರೋಗ ನೋಡಲ್ ಅಧಿಕಾರಿ ಡಾ.ಅನೀಲಕುಮಾರ ಚಿಂತಾಮಣಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸದಸ್ಯರು ಆಡಳಿತ ಮಂಡಳಿ ಹಾಗೂ ಬೀದರ ಬಿ.ವ್ಹಿಬಿ.ಶಾಲಾ ಕಾಲೇಜುಗಳ ಸಂಚಾಲಕರಾದ ಡಾ.ರಜನೀಶ ವಾಲಿ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ಬೀದರ ಬ್ರಿಮ್‌ನ್ಸ ಕ್ಷಯರೋಗ ತಜ್ಞರಾದ ಡಾ.ಸತೀಶ ಮುಡಬಿ ಅವರು ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೀದರ ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ.ಶಿವಶಂಕರ ಭತಮುರ್ಗೆ, ಬೀದರ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಶಿವಶಂಕರ ಬೊಮ್ಮಾ, ಬೀದರ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಕಿರಣ ಪಾಟೀಲ, ಬೀದರ ಎನ್.ಕೆ.ಜಾಬಶೆಟ್ಟಿ ಆಯುರ್ವೇದಿಕ ಕಾಲೇಜಿನ ಉಪನ್ಯಾಸಕರಾದ ಡಾ.ವಿನೋದ ಬೋರಾಳೆ, ಬೀದರ ಜಿಲ್ಲಾ ಕ.ಸಾ.ಪ. ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ, ಬೀದರ ಬಿ.ವ್ಹಿ.ಭೂಮರೆಡ್ಡಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಪಿ.ವಿಠಲ ರಡ್ಡಿ ವಹಿಸಲಿದ್ದಾರೆ.
ಕಾರ್ಯಕ್ರಮದ ಸ್ವಾಗತವನ್ನು ದೇವಿಪ್ರಸಾದ ಕಲಾಲ, ನಿರೂಪಣೆಯನ್ನು ಬೀದರ ಕನ್ನಡ ವಿಭಾಗ ಬಿ.ವಿ.ಬಿ. ಮುಖ್ಯಸ್ಥರಾದ ರೇಣುಕಾ ಮಳ್ಳಿ, ವಂದನಾರ್ಪಣೆ ಬೀದರ ಬಿ.ವಿ.ಬಿ. ಉಪ ಪ್ರಾಚಾರ್ಯರು ಅನೀಲಕುಮಾರ ಆಣದೂರೆ ಮಾಡಲಿದ್ದಾರೆ.

prajaprabhat

Share
Published by
prajaprabhat

Recent Posts

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

34 minutes ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

42 minutes ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

2 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

11 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

14 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

14 hours ago