ಕೊಡಗು.14.ಫೆ.25:- ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಪತ್ನಿ ಯೊಂದಿಗೆ ದಲೈಲಾಮ ಅವರನ್ನು ಭೇಟಿ ಮಾಡಿ, ಅವರ ಆಶೀರ್ವಾದ ಪಡೆದಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ಇತ್ತೀಚೆಗೆ ಭೇಟಿಯಾದ ಬಗ್ಗೆ ಸ್ಪಷ್ಟನೆ ನೀಡಿದರು.
ನಾವು ಬೌದ್ಧ ಧರ್ಮ ಪಾಲನೆ ಮಾಡುತ್ತೇವೆ. ದಲೈಲಾಮ ಆಶೀರ್ವಾದ ಪಡೆದುಕೊಳ್ಳಲು ಬಂದಿದ್ದೇವೆ. ಶಾಂತಿ ನೆಮ್ಮದಿ ಪಡೆದುಕೊಳ್ಳಲು ಬಂದಿದ್ದೇವೆ ಎಂದು ತಿಳಿಸಿದರು.
ದಲೈಲಾಮ ಬಂದಾಗ ಹಲವು ಬಾರಿ ಭೇಟಿ ಮಾಡಿದ್ದೇನೆ. ದಲೈಲಾಮ ಆರೋಗ್ಯವಾಗಿದ್ದಾರೆ. ಏಳು ವರ್ಷಗಳ ಬಳಿಕ ಇಲ್ಲಿಗೆ ಬಂದಿದ್ದಾರೆ. ಅವರಿಗೆ 90 ವರ್ಷ ಆಗಿದೆ, ಆರೋಗ್ಯವಾಗಿದ್ದಾರೆ. ಅವರ ಮೇಲೆ ಅಪಾರ ಗೌರವ ಇದೆ ಎಂದರು.
ಕೇಂದ್ರ ಸಚಿವರು ಬಂದ ಬಗ್ಗೆ ಮಾಹಿತಿ ಇಲ್ಲ ಭೇಟಿ ಆಗಿಲ್ಲ. ದಲೈಲಾಮ ಅವರಿಗೆ ಜೀವ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಎಲ್ಲಾ ಭದ್ರತೆಯನ್ನು ನೀಡಲಾಗಿದೆ. ಎಂದು ತಿಳಿಸಿದರು.
“ಅವರು ಯಾವಾಗಲೂ ಕರ್ನಾಟಕಕ್ಕೆ ಬಂದಾಗೆಲ್ಲ ನಾನು ಭೇಟಿ ಮಾಡುತ್ತೇನೆ. ಅವರ ಆಶೀರ್ವಾದವನ್ನು ಪಡೆದುಕೊಳ್ಳುತ್ತೇನೆ. ಅವರು ಬೌದ್ಧ ತತ್ವಗಳಲ್ಲಿ ನಂಬಿಕೆ ಇಟ್ಟವರು. ಅದೇ ರೀತಿ ನಮಗೆಲ್ಲರಿಗೂ ಕೂಡ ಆ ವಿಶ್ವಾಸ ನಂಬಿಕೆ ಇದೆ. ಅವರು ಇಡೀ ವಿಶ್ವಕ್ಕೆ ಶಾಂತಿ ಸಂದೇಶವನ್ನು ನೀಡುತ್ತಾರೆ. ಅದರಲ್ಲಿ ನಮಗೂ ನಂಬಿಕೆ ಇದೆ. ಹಾಗಾಗಿ ನಾನು ಅವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದುಕೊಂಡೆ. ಅದು ಬಿಟ್ಟರೆ ಬೇರೆ ಏನೂ ಇಲ್ಲ, ಯಾವುದೇ ಚರ್ಚೆಗಳು ನಡೆದಿಲ್ಲ. ಅವರ ಆಶೀರ್ವಾದ ಪಡೆದಿದ್ದೇನೆ ಅಷ್ಟೇ”, ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…