ಇಂದು ದಿ. ಕೆ.ಎಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮ್

ಕೊಪ್ಪಳ.22.ಜೂನ್.25:-ಜಲ ಸಂಪನ್ಮೂಲ ಇಲಾಖೆಯ ಕರ್ನಾಟಕ ನೀರಾವರಿ ನಿಗಮ ನಿಯಮಿತದ ವತಿಯಿಂದ ಮಾಜಿ ಮಂತ್ರಿಗಳಾದ ದಿ. ಶ್ರೀಯುತ ಕೆ.ಎಚ್. ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮವನ್ನು ಜೂನ್ 22ರ ರವಿವಾರ ಬೆಳಿಗ್ಗೆ 11 ಗಂಟೆಗೆ ಕುಕನೂರು ತಾಲ್ಲೂಕಿನ ಶಿರೂರು ಪುನರ್‌ವಸತಿ ಗ್ರಾಮದಲ್ಲಿ ನಡೆಯಲಿದೆ.

ಉಪ ಮುಖ್ಯಮಂತ್ರಿಗಳು, ಜಲ ಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ ಮತ್ತು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ನೂತನ ಮೂರ್ತಿ ಅನಾವರಣ ಮಾಡುವರು. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಸರ್ಕಾರದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ. ದೇಶಪಾಂಡೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ. ಪಾಟೀಲ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಹಾಗೂ ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನುಮನಗೌಡ ಪಾಟೀಲ್ ಅವರು ಘನ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರುಗಳಾಗ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ವಿ. ಪಾಟೀಲ್, ಶರಣಗೌಡ ಅನ್ನದಾನಗೌಡ ಪಾಟೀಲ್ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ತುಂಗಭದ್ರಾ ಯೋಜನೆಯ (ಕಾಡಾ) ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ ಪಾಲ್ಗೊಳ್ಳುವರು.

ವಿಶೇಷ ಆಹ್ವಾನಿತರಾಗಿ ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನರಾಜ್, ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಕೃಷ್ಣಮೂರ್ತಿ ಬಿ. ಕುಲಕರ್ಣಿ, ಕರ್ನಾಟಕ ನೀರಾವರಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಅಮ್ಮಿನಭಾವಿ, ಮಾಜಿ ಜಿ.ಪಂ. ಉಪಾಧ್ಯಕ್ಷರಾದ ಯಂಕಣ್ಣ ಯರಾಶಿ ಹಾಗೂ ಹನಮಂತಗೌಡ ಪಾಟೀಲ್, ಕುಕನೂರಿನ ಸತ್ಯನಾರಾಯಣ ಹರಪನಹಳ್ಳಿ, ಮಾಜಿ ಜಿ.ಪಂ. ಸದಸ್ಯರಾದ ಅಶೋಕ ತೋಟದ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾದ ಕಾಶಿಂಸಾಬ ತಳಕಲ್, ಕುಕನೂರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕ ಅಧ್ಯಕ್ಷರಾದ ಸಂಗಮೇಶ ಗುತ್ತಿ ಭಾಗವಹಿಸುವರು.

ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಕನೀನಿನಿ ನೀರಾವರಿ ಕೇಂದ್ರ ವಲಯ ಮುನಿರಾಬಾದನ ಮುಖ್ಯ ಇಂಜೀನಿಯರ್ ಎಲ್. ಬಸವರಾಜ, ಕನೀನಿನಿ ಸಿಂಗಟಾಲೂರ ಏತ ನೀರಾವರಿ ಯೋಜನೆ ವಿಭಾಗ ನಂ.1 ಮುಂಡರಗಿಯ ಕಾರ್ಯ ನಿರ್ವಾಹಕ ಅಭಿಯಂತರರಾದ ಐ. ಪ್ರಕಾಶ, ಕನೀನಿನಿ ಸಿಂಗಟಾಲೂರ ಏತ ನೀರಾವರಿ ಯೋಜನೆ ಉಪ ವಿಭಾಗ ನಂ.3 ಅಳವಂಡಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಾಘವೇಂದ್ರಚಾರ್ಯ ಜೋಶಿ ಹಾಗೂ ಶಿರೂರು ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಯೋಜನಾ ಅನುಷ್ಠಾನ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಮತ್ತು ಗ್ರಾಮದ ಗುರು

prajaprabhat

Recent Posts

ಕೆ.ಎಚ್. ಪಾಟೀಲ್ ಅವರು ಹುಟ್ಟು ಹೋರಾಟಗಾರರಾಗಿದ್ದರು- ಗೃಹ ಸಚಿವ ಡಾ. ಜಿ. ಪರಮೇಶ್ವರ

ಶಿರೂರು ಪುನರ್‌ವಸತಿ ಗ್ರಾಮದಲ್ಲಿ ದಿ. ಕೆ.ಎಚ್.ಪಾಟೀಲ್ ರವರ ಮೂರ್ತಿ ಅನಾವರನ್.----ಕೊಪ್ಪಳ.22.ಜೂನ್.25:-ಕೆ.ಎಚ್. ಪಾಟೀಲ್ ಅವರು ತಮ್ಮ ಗೌಡಿಕೆಯನ್ನು ಮೀರಿ ಜನ ಸಮುದಾಯದ…

53 minutes ago

PSI 1000 ಸಾವಿರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ: ಸಚಿವ ಜಿ. ಪರಮೇಶ್ವರ್

ಕೊಪ್ಪಳ.22.ಜೂನ್.25:PSI ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ. ನೇಮಕಾತಿ ಹಗರಣದ ನಂತರ ಐದು ವರ್ಷ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ ಒಂದು…

5 hours ago

ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆ: ಸಂಸದ ಕೆ.ರಾಜಶೇಖರ ಹಿಟ್ನಾಳ

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ. ಕೊಪ್ಪಳ.22.ಜೂನ್.25:- ಒತ್ತಡಗಳನ್ನು ನಿವಾರಿಸುವ ದಿವ್ಯ ಔಷಧಿಯಾಗಿರುವ ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆಯಾಗಿದೆ…

5 hours ago

ಗಿಣಿಗೇರಾ ಗ್ರಾಮದ ಅಮೃತ ಸರೋವರ ದಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕೊಪ್ಪಳ.22.ಜೂನ್.25:-ಅಂತರಾಷ್ಟ್ರೀಯ ಯೋಗ ದಿನ ಪ್ರಯುಕ್ತ ಗಿಣಿಗೇರಾ ಗ್ರಾಮ ಪಂಚಾಯತಿ ಹಾಗೂ ಕೆರೆ ಅಭಿವೃದ್ಧಿ ಸಮಿತಿ ವತಿಯಿಂದ ಗಿಣಿಗೇರಾ ಗ್ರಾಮದ ಅಮೃತ…

5 hours ago

ಯೋಗ ಪರಂಪರೆ ವಿಶ್ವವ್ಯಾಪಿಯಾಗಿ ಬೆಳೆದಿದೆ: ಪ್ರೊ.ಕೆ.ವಿ. ಪ್ರಸಾದ್

ಕೊಪ್ಪಳ.22.ಜೂನ್.25:- ದೇಹ ಮತ್ತು ಮನಸ್ಸಿನ ಸಂಯೋಗವೇ ಯೋಗ ಭಾರತೀಯ ಯೋಗ ಪರಂಪರೆಯಿಂದು ವಿಶ್ವವ್ಯಾಪಿಯಾಗಿ ಬೆಳೆದಿದೆ ಎಂದು ಕೊಪ್ಪಳ ವಿಶ್ವ ವಿದ್ಯಾಲಯದ…

6 hours ago

ಜೂ. 23 ರಂದು ವಿವಿಧ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯ

ಕೊಪ್ಪಳ.22.ಜೂನ್.25:-  ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ 110/33/11ಕೆ.ವಿ ಎಂ.ಯು.ಎಸ್.ಎಸ್ ಗಿಣಿಗೇರಾ ಸ್ಟೇಷನ್‌ನ ತ್ರೆöÊಮಾಸಿಕ ನಿರ್ವಹಣೆ ಕಾಮಗಾರಿ (ಮೆಂಟೆನನ್ಸ್) ನಡೆಸುತ್ತಿರುವ ಪ್ರಯುಕ್ತ ಜೂನ್…

6 hours ago