ಬಳ್ಳಾರಿ.11.ಫೆ.25:- ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವು ಭಾರತದ ಪ್ರತಿಯೊಬ್ಬ ನಾಗರಿಕರಿಗೆ ಪವಿತ್ರ ಗ್ರಂಥವಾಗಿದೆ’ ಎಂದು ಸಾಹಿತಿ ಹಾಗೂ ಬಾಬು ಜಗಜೀವನ್ ರಾಂ ಪ್ರಶಸ್ತಿ ಪುರಸ್ಕೃತೆ ಎನ್.ಡಿ.ವೆಂಕಮ್ಮ ಅಭಿಪ್ರಾಯಪಟ್ಟರು.
ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಪರಿಚಯ ಕುರಿತು ಮಂಗಳವಾರ ಏರ್ಪಡಿಸಿದ್ದ ‘ಅಂಬೇಡ್ಕರ್ ಓದು’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷೆ ಎಂ.ಕಾತ್ಯಾಯಿನಿ ಮರಿದೇವಯ್ಯ ಮಾತನಾಡಿ, ‘ಅಂಬೇಡ್ಕರ್ ವಿಚಾರ-ಧಾರೆಗಳನ್ನು ಅರಿತುಕೊಳ್ಳಬೇಕು. ವಿದ್ಯಾರ್ಥಿಗಳು ಅವರ ಪುಸ್ತಕಗಳನ್ನು ಓದಿ ಪ್ರಜ್ಞಾವಂತರಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕು’ ಎಂದರು.
ಸತ್ಯಂ ಶಿಕ್ಷಣ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಅಲಂಭಾಷ ಮಾತನಾಡಿ, ‘ಅಂಬೇಡ್ಕರ್ ರಚಿತ ಸಂವಿಧಾನವು ವಿವಿಧ ದೇಶಗಳಿಗೆ ಮಾದರಿಯಾಗಿದ್ದು, ಸಂವಿಧಾನದ ಮೂಲಕ ಸಮಾಜಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ’ ಎಂದು ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ್‌ರವರ ಬದುಕು ಮತ್ತು ಸಾಧನೆಗಳ ಪರಿಚಯ ಕುರಿತು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪುಸ್ತಕ ರೂಪದಲ್ಲಿ ಬಹುಮಾನ ವಿತರಣೆ ಮಾಡಲಾಯಿತು.
ನವದೆಹಲಿ.18.ಏಪ್ರಿಲ್.25;- ವಿವಾದಾತ್ಮಕ ಹೇಳಿಕೆಯೊಂದರಲ್ಲಿ, ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಚಂಪೈ ಸೊರೆನ್ ಅವರು ಬೇರೆ ಧರ್ಮಕ್ಕೆ…
ಬೆಂಗಳೂರು.18.ಏಪ್ರಿಲ್.25:- ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆಯ್ಕೆಯಾಗಿರುವ ಕ್ರೀಡಾಪಟುಗಳು 2024-25ನೇ ಸಾಲಿನ. ನಿರ್ವಹಿಸಬೇಕಾದ…
ವೈರಲ್ ವಿಡಿಯೋ: ಉತ್ತರ ಪ್ರದೇಶದ ಪೊಲೀಸರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಎಚ್ಚರಿಕೆಯ ಹೊರತಾಗಿಯೂ, ಅವರ ಇಮೇಜ್ ಅನ್ನು ಸುಧಾರಿಸಲು…
ಔರಾದ್.18.ಏಪ್ರಿಲ್.25:- ಔರಾದ ನಗರದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸುವ ಉದ್ದೇಶದಿಂದ, ದಿನಾಂಕ 22 ಎಪ್ರಿಲ್…
ಜಿಲ್ಲೆಯ ಗೃಹರಕ್ಷಕರ ಸ್ವಯಂಸೇವಕ ಸ್ಥಾನಗಳನ್ನು ಭರ್ತಿ ಮಾಡಲು ಸಂಡೂರು, ಸಿರುಗುಪ್ಪ, ಕುರುಗೋಡು, ಕುಡುತಿನಿ, ತೆಕ್ಕಲಕೋಟೆ, ಮತ್ತು ತೋರಣಗಲ್ಲು ಘಟಕಗಳಲ್ಲಿ ಖಾಲಿ…
ವಿಶ್ವವಿದ್ಯಾಲಯ ಧನಸಹಾಯ ಅಯೋಗ್ ಅಧಿಸೂಚನೆ: ಹೊಸ ದೆಹಲಿ.18.ಏಪ್ರಿಲ್.25:- UGC: ವರ್ಷಕ್ಕೆ ಎರಡು ಬಾರಿ ಅಡ್ಮಿಷನ್‌ಗೂ ಅವಕಾಶ, ಹೊಸ ಅಧಿಸೂಚನೆ ಭಾರತದ…