Categories: ಬೀದರ

ಇಂದು ಬೀದರ್ ನಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿಯವರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ಆಶಾ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಸರ್ಕಾರಿ ನೌಕರರಾಗಿ ನೇಮಕ ಮಾಡುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿಯವರು ಧರಣಿ ಆರಂಭಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸೇವೆ ಕಾಯಂಗೊಳಿಸುವ ಸಂಬಂಧ ಈಗಾಗಲೇ ಗುಜರಾತ್‌ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಪ್ರವರ್ಗ-3 ಹಾಗೂ ಪ್ರವರ್ಗ-4ರ ಅಡಿ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

ಕೂಡಲೇ ಗ್ರ್ಯಾಚುಟಿ ಹಣ ಬಿಡುಗಡೆಗೊಳಿಸಬೇಕು. 2018ರಿಂದ ಕೇಂದ್ರ ಸರ್ಕಾರ ಗೌರವ ಧನ ಹೆಚ್ಚಿಸಿಲ್ಲ. ಅದನ್ನು ₹26 ಸಾವಿರಕ್ಕೆ ಹೆಚ್ಚಿಸಬೇಕು. 2023ರ ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟಿರುವ ಭರವಸೆಯಂತೆ ಕಾಂಗ್ರೆಸ್‌ ಪಕ್ಷವು ರಾಜ್ಯದಲ್ಲಿ ಗೌರವ ಧನವನ್ನು ₹15 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ನಿವೃತ್ತರಾದವರಿಗೆ ಇಡುಗಂಟು ಮತ್ತು ಎನ್‌ಪಿಎಸ್‌ ಹಣವನ್ನು ಮಾಸಿಕ ₹10 ಸಾವಿರ ಪಿಂಚಣಿ ನೀಡಬೇಕು. ಎಲ್ಲ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ, ಎಲ್‌ಕೆಜಿ-ಯುಕೆಜಿ ಆರಂಭಿಸಬೇಕು. ಐಸಿಡಿಎಸ್‌ ಯೋಜನೆ ಜಾರಿಗೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಎಲ್ಲ ರೀತಿಯ ಚುನಾವಣಾ ಕೆಲಸಗಳಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಮುಕ್ತಗೊಳಿಸಬೇಕು. ಇದರಿಂದ ದೈನಂದಿನ ಕೆಲಸ ನಿರ್ವಹಿಸಲು ಹೋಗಲು ತೊಂದರೆಯಾಗುತ್ತಿದೆ. ಸಾಮೂಹಿಕ ಆರೋಗ್ಯ ವಿಮೆ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮೂಲಸೌಕರ್ಯ ಕಲ್ಪಿಸಬೇಕು. ಖಾಲಿ ಹುದ್ದೆಗಳನ್ನು ಮೂರು ತಿಂಗಳೊಳಗೆ ತುಂಬಬೇಕು. ಓವರ್‌ ಟೈಮ್‌ ಕೆಲಸ ಮಾಡಿದರೆ ಅದಕ್ಕೆ ಹೆಚ್ಚುವರಿ ಹಣ ಕೊಡಬೇಕು. ಮುಂಬಡ್ತಿ, ವರ್ಗಾವಣೆ ಪ್ರಕ್ರಿಯೆ ನಡೆಸಬೇಕು. ಮಿನಿ ಅಂಗನವಾಡಿಗಳನ್ನು ಪೂರ್ಣ ಪ್ರಮಾಣದ ಅಂಗನವಾಡಿಗಳಾಗಿ ಪರಿವರ್ತಿಸಬೇಕು. ಮಾಸಿಕ ಸಭೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕುರ್ಚಿ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಸಮಿತಿ ಅಧ್ಯಕ್ಷೆ ಸುಶೀಲಾ ಹತ್ತಿ, ಕಾರ್ಯಾಧ್ಯಕ್ಷೆ ಶ್ರೀದೇವಿ ಚುಡೇ, ಪ್ರಧಾನ ಕಾರ್ಯದರ್ಶಿ ಜಯಶ್ರೀ, ಖಜಾಂಚಿ ಮಹದೇವಮ್ಮ ಸೇರಿದಂತೆ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಧರಣಿಯಲ್ಲಿ ಪಾಲ್ಗೊಂಡಿದ್ದರು.

prajaprabhat

Share
Published by
prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

4 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

4 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

5 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

5 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

6 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

16 hours ago