09/06/2025 8:49 PM

Translate Language

Home » ಜೀಲ್ಲೆ » ಇಂದು ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು
ಒಂದು ದಿನದ ಕಾರ್ಯಾಗಾರ

ಇಂದು ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು
ಒಂದು ದಿನದ ಕಾರ್ಯಾಗಾರ

Facebook
X
WhatsApp
Telegram


ಬೀದರ, ನವೆಂಬರ್.21 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಒಡನಾಡಿ ಸೇವಾ ಸಂಸ್ಥೆ ಮೈಸೂರು, ಸಮೃದ್ಧಿ ಚಾರಿಟೇಬಲ್ ಟ್ರಸಟ್ ಬೀದರ, ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ ಬೀದರ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬೀದರ ಇವರ ಸಂಯುಕ್ತಾಶ್ರಯದಲ್ಲಿ ನವೆಂಬರ್.22 ರಂದು ಬೆಳಿಗ್ಗೆ 10.30 ಗಂಟೆಗೆ ಸಾಂಸ್ಕೃತಿಕ ಭವನ ಸಭಾಂಗಣ, ಕರ್ನಾಟಕ ಸಾಹಿತ್ಯ ಸಂಘ ಬೀದರದಲ್ಲಿ “ಮಾನವ ಕಳ್ಳ ಸಾಗಾಣಿಕೆ ತಡೆ” ಕುರಿತು ಸಹಭಾಗೀದಾರ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥರುಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಬದೋಲೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಾಶ ಎ.ಬನಸೋಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ, ಬೆಂಗಳೂರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ, ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀಧರ್ ಎಮ್.ಎಸ್., ಬೀದರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಲೀಂ ಪಾಶಾ ವಹಿಸಲಿದ್ದಾರೆ.
ಪ್ರಾಸ್ತಾವಿಕ ನುಡಿ ಮೈಸೂರು ಒಡನಾಡಿ ಸೇವಾ ಸಂಸ್ಥೆಯ ಕಾರ್ಯದರ್ಶಿ ಸ್ವಾö್ಯನ್ಲಿ ಕೆ.ವಿ. ಮಾಡಲಿದ್ದಾರೆ. ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರು ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾ ಪರಶುರಾಮ್ ಎಂ.ಎಲ್., ಬೀದರ ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿಗಳಾದ ಮನಿಶಾ ಸಾಳೆ, ಬೀದರ ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಎಮ್.ಎಸ್.ಶೀರೋಮಣಿ ಭಾಗವಹಿಸಲಿದ್ದಾರೆ

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!