|

ಇಂದು ಮುಖ್ಯಮಂತ್ರಿ ಬದಲಾವಣೆ ಹೇಳಿಕೆ ಕೊಟ್ಟ ಸಚಿವ ಮಹದೇವಪ್ಪ

ಬೆಂಗಳೂರು.15.ಜೂನ್.25:- ಪ್ರಸ್ತುತ ಮುಖ್ಯಮಂತ್ರಿ ಬದಲಾವಣೆ ಯಾವುದೇ ಪ್ರಸ್ತಾವ ಸರ್ಕಾರ ಅಥವಾ ಪಕ್ಷದ ಮುಂದಿಲ್ಲ ಎಂದು  ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಯಾಗಿಯೇ ಮುಂದುವರೆಯುತ್ತಾರೆ ಎಂದರು..ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಕಾಂಗ್ರೆಸ್‌‍ ಹೈಕಮಾಂಡ್‌ ಯಾವಾಗ ವಿಷಯ ತಿಳಿಸಿದೆಯೋ ಗೊತ್ತಿಲ್ಲ.

ಸರ್ಕಾರದ ನಡುವೆ ಹೊಂದಾಣಿಕೆ ಇದೆ. ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ಸಮಸ್ಯೆ ಇಲ್ಲ ಎಂಬುದಕ್ಕೆ ನಿನ್ನೆ ಯಾದಗಿರಿಯಲ್ಲಿ ನಡೆದ ಕಾರ್ಯಕ್ರಮವೇ ಸಾಕ್ಷಿ. ಲಕ್ಷಾಂತರ ಜನ ಅಭಿವೃದ್ಧಿ ಕಾರ್ಯಗಳಿಗೆ ಸಾಕ್ಷಿಯಾಗಿದ್ದರು. ವಿರೋಧಪಕ್ಷಗಳು ರಾಜಕೀಯಕ್ಕಾಗಿ ಸುಳ್ಳು ಹೇಳುತ್ತಿವೆ ಎಂದು ಆರೋಪಿಸಿದರು.

ಇದೇ ತಿಂಗಳ 23ಕ್ಕೆ ರಾಯಚೂರಿನಲ್ಲಿ ಮತ್ತೊಂದು ಬೃಹತ್‌ ಸಮಾವೇಶ ನಡೆಯಲಿದೆ. ಅಲ್ಲಿಯೂ ನೂರಾರು ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ ಎಂದರು.
ಭ್ರಷ್ಟಾಚಾರ ನಡೆಯುತ್ತಿದ್ದರೆ ದಾಖಲಾತಿಗಳನ್ನು ತನಿಖಾ ಸಂಸ್ಥೆಗೆ ಕೊಡಲಿ. ಎಚ್‌.ವಿಶ್ವನಾಥ್‌ ಹಿರಿಯ ರಾಜಕಾರಣಿ. ಅವರು ಮಾತನಾಡುವಾಗ ಅದರಲ್ಲಿ ಸತ್ಯಾಂಶ ಇರಬೇಕು. ಆಧಾರಗಳಿರಬೇಕು ಎಂದು ಹೇಳಿದರು.

Similar Posts

Leave a Reply

Your email address will not be published. Required fields are marked *