ಬೆಂಗಳೂರು.15.ಜೂನ್.25:- ಪ್ರಸ್ತುತ ಮುಖ್ಯಮಂತ್ರಿ ಬದಲಾವಣೆ ಯಾವುದೇ ಪ್ರಸ್ತಾವ ಸರ್ಕಾರ ಅಥವಾ ಪಕ್ಷದ ಮುಂದಿಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಯಾಗಿಯೇ ಮುಂದುವರೆಯುತ್ತಾರೆ ಎಂದರು..ಬಿಜೆಪಿಯ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಾಂಗ್ರೆಸ್ ಹೈಕಮಾಂಡ್ ಯಾವಾಗ ವಿಷಯ ತಿಳಿಸಿದೆಯೋ ಗೊತ್ತಿಲ್ಲ.
ಸರ್ಕಾರದ ನಡುವೆ ಹೊಂದಾಣಿಕೆ ಇದೆ. ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ಸಮಸ್ಯೆ ಇಲ್ಲ ಎಂಬುದಕ್ಕೆ ನಿನ್ನೆ ಯಾದಗಿರಿಯಲ್ಲಿ ನಡೆದ ಕಾರ್ಯಕ್ರಮವೇ ಸಾಕ್ಷಿ. ಲಕ್ಷಾಂತರ ಜನ ಅಭಿವೃದ್ಧಿ ಕಾರ್ಯಗಳಿಗೆ ಸಾಕ್ಷಿಯಾಗಿದ್ದರು. ವಿರೋಧಪಕ್ಷಗಳು ರಾಜಕೀಯಕ್ಕಾಗಿ ಸುಳ್ಳು ಹೇಳುತ್ತಿವೆ ಎಂದು ಆರೋಪಿಸಿದರು.
ಇದೇ ತಿಂಗಳ 23ಕ್ಕೆ ರಾಯಚೂರಿನಲ್ಲಿ ಮತ್ತೊಂದು ಬೃಹತ್ ಸಮಾವೇಶ ನಡೆಯಲಿದೆ. ಅಲ್ಲಿಯೂ ನೂರಾರು ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ ಎಂದರು.
ಭ್ರಷ್ಟಾಚಾರ ನಡೆಯುತ್ತಿದ್ದರೆ ದಾಖಲಾತಿಗಳನ್ನು ತನಿಖಾ ಸಂಸ್ಥೆಗೆ ಕೊಡಲಿ. ಎಚ್.ವಿಶ್ವನಾಥ್ ಹಿರಿಯ ರಾಜಕಾರಣಿ. ಅವರು ಮಾತನಾಡುವಾಗ ಅದರಲ್ಲಿ ಸತ್ಯಾಂಶ ಇರಬೇಕು. ಆಧಾರಗಳಿರಬೇಕು ಎಂದು ಹೇಳಿದರು.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…