Home » ಲೈವ್ ನ್ಯೂಸ್ » ಇಂದು ಯಾಪಲದಿನ್ನಿ ಶಾಲಾ ಆವರಣದಲ್ಲಿ ಪ್ರಜಾಸೇವೆ ಆಂದೋಲನ ಸಭೆ

ಇಂದು ಯಾಪಲದಿನ್ನಿ ಶಾಲಾ ಆವರಣದಲ್ಲಿ ಪ್ರಜಾಸೇವೆ ಆಂದೋಲನ ಸಭೆ

ರಾಯಚೂರು.05.ಸೆಪ್ಟಂಬರ್.26: ಸರ್ಕಾರದ ಮಾರ್ಗಸೂಚಿಯಂತೆ ಪ್ರತಿ ತಿಂಗಳ 1ನೇ ಮತ್ತು 3ನೇ ಶನಿವಾರದಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕತೆಯಲ್ಲಿ ಮತ್ತು ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ತಾಲೂಕ ಮಟ್ಟದ ಪ್ರಜಾಸೇವೆ ಆಂದೋಲವನ್ನು ಮತ್ತು 2ನೇ ಮತ್ತು 4 ನೇ ಶನಿವಾರದಂದು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕ ಮಟ್ಟದ ಪ್ರಜಾಸೇವೆ ಅಂದೋಲವನ್ನು ಗ್ರಾಮ ಪಂಚಾಯತ ಕೇಂದ್ರವನ್ನಾಗಿಸಿ ಕಾರ್ಯಕ್ರಮವನ್ನು ಯಶಸ್ವಿಗೋಳಿಸಿ ಸಾರ್ವಜನಿಕರಿಗೆ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ಒದಗಿಸಲು ದಿನಾಂಕ:05-09-2026ರoದು ಕರ್ನಾಟಕ ರಾಜ್ಯಾದ್ಯಾಂತ ಚಾಲನೆ ನೀಡಲು ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ.
ಜಿಲ್ಲಾಧಿಕಾರಿಗಳ ಮಾರ್ಗಸೂಚಿಗಳಂತೆ ರಾಯಚೂರು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ಸ್ಥಳಿಯ ಶಾಸಕರ ಅಧ್ಯಕ್ಷತೆಯಲ್ಲಿ ಪ್ರಜಾಸೇವೆ ಸಭೆಯನ್ನು ಹಮ್ಮಿಕೊಳ್ಳಲು ಸೂಕ್ತವಾದ ಸ್ಥಳವನ್ನು ಗುರುತಿಸಿ ಅಂದೋಲವನ್ನು ಯಶಸ್ವಿಗೊಳಿಸಲು ಸೂಚಿಸಿರುತ್ತಾರೆ.

ರಾಯಚೂರು ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಪಬ್ಲಿಕ್ ಯಾಪಲದಿನ್ನಿ ಶಾಲಾ ಆವರಣದಲ್ಲಿ ಘನ ಕರ್ನಾಟಕ ಸರ್ಕಾರದ ಪ್ರಜಾಸೇವೆ ಆಂದೋಲವನ್ನು ಏರ್ಪಡಿಸಲಾಗಿದೆ.

ರಾಯಚೂರು ತಾಲೂಕಿನ ತಾಲೂಕ ಮಟ್ಟದ ಅಧಿಕಾರಿಗಳು ಸದರಿ ಸಭೆಯಲ್ಲಿ ಹಾಜರಾಗಿರುತ್ತಾರೆ. ಚಂದ್ರಬoಡಾ ಹೋಬಳಿಯ ಎಲ್ಲಾ ಗ್ರಾಮಗಳ ಸಾರ್ವಜನಿಕರು, ರೈತರು ಮತ್ತು ಪಿಂಚಣಿದಾರರು ಇತರೆ ಕುಂದು ಕೊರತೆಗಳನ್ನು ಅನುಭವಿಸುವ ಫಲಾನುಭವಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಸದರಿ ಪ್ರಜಾ ಸೇವೆ ಅಂದೋಲವನ್ನು ಯಶಸ್ವಿಗೊಳಿಸಿ ತಮ್ಮ ಕುಂದು ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ರಾಯಚೂರು ತಹಶೀಲ್ದಾರ ಸುರೇಶ ವರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology