ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಅಂದು ಆಗಸ್ಟ್ 12ರಂದು ಬೆಳ್ಳಗೆ 8.30 ರಿಂದ 1:30ರ ವರೆಗೆ ಯಲಬುರ್ಗಾ ತಾಲ್ಲೂಕಿನ ವಿವಿಧ ವಸತಿ ನಿಲಯ, ಗ್ರಾಮ ಪಂಚಾಯತ್, ಶಾಲೆ, ಜೂನಿಯರ್ ಕಾಲೇಜ್, ಆಸ್ಪತ್ರೆ, ಅಂಗನವಾಡಿ ಮತ್ತು ಬೇವೂರು ಪೊಲೀಸ್ ಠಾಣೆಗೆ ಭೇಟಿ ನೀಡಿ, ಪರಿಶೀಲಿಸುವರು.
ನಂತರ ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಯಲಬುರ್ಗಾ ತಹಶೀಲ್ದಾರರ ಕಛೇರಿಯ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಭಾಗೀದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ’ ನಡೆಸುವರು.
ಸದಸ್ಯರು ಭೇಟಿ ಅವಧಿಯಲ್ಲಿ ಹಾಗೂ ಪ್ರಗತಿ ಪರಿಶೀಲನಾ ಸಭೆಗೆ ಸಂಬಂಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.