09/06/2025 5:35 PM

Translate Language

Home » ಲೈವ್ ನ್ಯೂಸ್ » ಇಂದು ರಾಷ್ಟ್ರೀಯ ಡೆಂಗಿ ದಿನಾಚರಣೆ ನಿಮಿತ್ಯ ಜನಜಾಗೃತಿ ಜಾಥಾ

ಇಂದು ರಾಷ್ಟ್ರೀಯ ಡೆಂಗಿ ದಿನಾಚರಣೆ ನಿಮಿತ್ಯ ಜನಜಾಗೃತಿ ಜಾಥಾ

Facebook
X
WhatsApp
Telegram

ಬೀದರ.15.ಮೇ.25:- 2025ನೇ ಸಾಲಿನ ರಾಷ್ಟ್ರೀಯ ಡೆಂಗಿ ದಿನಾಚರಣೆ ನಿಮಿತ್ಯ ಮೇ.16 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬೀದರ ಕಛೇರಿ ಆವರಣದಿಂದ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಜನಜಾಗೃತಿ ಜಾಥಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬೀದರ ಇವರ ಕಛೇರಿ ಆವರಣದಿಂದ ಪ್ರಾರಂಭಗೊಂಡು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ ರಸ್ತೆ, ಹಳೆ ಬಸ್ ನಿಲ್ದಾಣ ಮಾರ್ಗದ ಮುಖಾಂತರ ಹಾದು ಜಿಲ್ಲಾ ತರಬೇತಿ ಕೇಂದ್ರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಕೊನೆಗೊಳ್ಳಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!