|

ಇಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಬೀದರ.12.ಜೂನ್.25:- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಜೂನ್.12 ರಂದು ಬೆಳಿಗ್ಗೆ 10.30ಕ್ಕೆ ರಂಗಮoದಿರದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ನಡೆಯಲಿದೆ.


ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಜಾಗೃತಿ ಜಾಥಾಗೆ ಚಾಲನೆ ನೀಡಲಿದ್ದಾರೆ.
ನ್ಯಾಯವಾದಿ ಅಂಜನಾ ಕುಲಕರ್ಣಿ ಅವರು ಉಪನ್ಯಾಸ ನಡೆಸಿಕೊಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೋಡೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶೀಧರ ಕೋಸಂಬೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸನ್ಮುಖಯ್ಯಾ ಬಿ.ಸ್ವಾಮಿ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಧನರಾಜ ಬಿರಾದಾರ, ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಲಕ್ಷ್ಮಣ ಕುಳಲಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

Similar Posts

Leave a Reply

Your email address will not be published. Required fields are marked *