ಬೀದರ.01.ಆಗಸ್ಟ್.25:- ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಬೀದರ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯಮಹಾಂತ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ಬೀದರ ಹಾಗೂ ಬಈದರ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್.1 ರಂದು ಬೆಳಿಗ್ಗೆ 10 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮoದಿರ ಬೀದರದಲ್ಲಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.
ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪಾ ಎನ್.ಪಾಟೀಲ, ಹಾಗೂ ವಿಧಾನ ಪರಿಷತ್ತ ಶಾಸಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ಬಿ.ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರುಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸವನ್ನು ಬೀದರ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ, ಲಾತೂರ ಸರಕಾರಿ ವೈದ್ಯಕೀಯ ಕಾಲೇಜಿನ ನಿವೃತ್ತ ಡೀನ್ ಡಾ.ಅಮರನಾಥ ಸೋಲಪೂರ, ಬೀದರ ಬ್ರಿಮ್ಸ್ ಮನೋವೈದ್ಯ ಡಾ.ರಾಘವೇಂದ್ರ ನೀಡಲಿದ್ದಾರೆ.
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…